

ಹಾಸನ: ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಭಾರಿ ಜಖಂಗೊಂಡಿದ್ದು, ರಾಜಕಾರಣಿಯ ಪುತ್ರ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಹಾಸನದ ಬೇಲೂರು ತಾಲೂಕಿನ ಶಿವಯೋಗಿಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಟೊಯೊಟೊ ಫಾರ್ಚೂನರ್ ಮತ್ತು ಟಾಟಾ ಇಂಡಿಕಾ ಕಾರುಗಳ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ವಿಶಾಲ್ ಸುಜಯ್ ಕುಮಾರ್, ಮದನ್, ಮೋಹನ್, ಅನಿರುದ್ಧ ಎಂಬವರು ಗಾಯಗೊಂಡಿದ್ದಾರೆ. ಆ ಪೈಕಿ ಮೂವರ ಪರಿಸ್ಥಿತಿ ಗಂಭೀರವಾಗಿದೆ.
ವಿಶಾಲ್ ಸುಜಯ್ ಕುಮಾರ್ ಚಿಕ್ಕಮಗಳೂರು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅವರ ಪುತ್ರ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಜಖಂಗೊಂಡಿವೆ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.