ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮಗು ಸಹಿತ ನಾಲ್ವರು ಸ್ಥಳದಲ್ಲೇ ಸಾವು

Accident (3)
Published on

ಮಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಹಿಂದೆ ಒಂದೇ ದಿವಸ ಸಂಭವಿಸಿದ್ದ ಎರಡು ಪ್ರತ್ಯೇಕ ಭೀಕರ ಅಪಘಾತಗಳಲ್ಲಿ ಒಂದರಲ್ಲಿ ಆರು ಮಂದಿ ಹಾಗೂ ಇನ್ನೊಂದರಲ್ಲಿ ಐವರು ಸಾವಿಗೀಡಾಗಿದ್ದರು. ಇಂದು ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮಗು ಸಹಿತ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಬಳಿಯ ನೆಟ್ಟಣದಲ್ಲಿ ಕಾರು ಹಾಗೂ ತೂಫಾನ್ ವಾಹನ ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮಗು, ಒಬ್ಬಳು ಮಹಿಳೆ, ಇಬ್ಬರು ಪುರುಷರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೇಳೂರಿನ ಈ ಕುಟುಂಬದವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯವರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net