ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ: 2 ಸಲ ಪಲ್ಟಿಯಾದ ಕಾರು; ಐವರಿಗೆ ಗಾಯ, ಇಬ್ಬರ ಪರಿಸ್ಥಿತಿ ಗಂಭೀರ

Expressway Accident
Published on

ಮಂಡ್ಯ: ಮೈಸೂರು-ಬೆಂಗಳೂರು ದಶಪಥದಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಇಂದು ಮತ್ತೊಂದು ಭಾರಿ ಅಪಘಾತ ಉಂಟಾಗಿದೆ. ಅಪಘಾತದ ತೀವ್ರತೆಗೆ ಕಾರು ಎರಡು ಸಲ ಪಲ್ಟಿಯಾಗಿದೆ. ಮಾತ್ರವಲ್ಲ ಐವರಿಗೆ ಗಾಯಗಳಾಗಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.

ಮಂಡ್ಯ ಬಳಿಯ ಚಿಕ್ಕಮಂಡ್ಯ ಸಮೀಪ ಈ ಅಪಘಾತ ಸಂಭವಿಸಿದೆ. ಟಯರ್​ ಬರ್ಸ್ಟ್​ ಆಗಿ ಕಾರು ಅಪಘಾತಕ್ಕೀಡಾಗಿದ್ದು, ಎರಡು ಸಲ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡವರು ಬೆಂಗಳೂರು ಮೂಲದವರು ಎಂಬುದು ತಿಳಿದು ಬಂದಿದೆ.

ಕಾರಿನಲ್ಲಿದ್ದವರು ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡವರಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ದಶಪಥದಿಂದ ತೆರವುಗೊಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net