ಕಲಬುರಗಿಯಲ್ಲಿ ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್​ ರವಿ ಉಕ್ಕುಂದ, ಪತ್ನಿ ದುರ್ಮರಣ

accident cpi ravi ukkunda
Published on

ಕಲಬುರಗಿ: ಜೇವರ್ಗಿ ತಾಲೂಕಿನ ಎಸ್​ಎನ್ ಹಿಪ್ಪರಗಿ ಬಳಿ ಇಂದು(ಬುಧವಾರ) ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸರ್ಕಲ್​ ಇನ್​ಸ್ಪೆಕ್ಟರ್​ ರವಿ ಉಕ್ಕುಂದ ಮತ್ತು ಇವರ ಪತ್ನಿ ದುರ್ಮರಣಕ್ಕೀಡಾಗಿದ್ದಾರೆ.

ರವಿ ಉಕ್ಕುಂದ ಅವರು ವಿಜಯಪುರ ಜಿಲ್ಲೆ ಸಿಂಧಗಿ ಠಾಣೆಯಲ್ಲಿ ಸಿಪಿಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಲಬುರಗಿಯ ಆಸ್ಪತ್ರೆಗೆಂದು ಸಿಂಧಗಿಯಿಂದ ಪತ್ನಿ ಜತೆಗೆ ರವಿ ಉಕ್ಕುಂದ ಅವರು ಸ್ವಂತ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ.

ರವಿ ಉಕ್ಕುಂದ ಅವರೇ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ರಸ್ತೆ ಕ್ರಾಸ್​ ಮಾಡುವಾಗ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ದಂಪತಿ ದುರಂತ ಅಂತ್ಯ ಕಂಡಿದ್ದಾರೆ. ನೆಲೋಗಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ರವಾನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net