

ಮೈಸೂರು: ಮದುವೆಗೆ ಬಂದಿದ್ದವರು ಮರಳುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೈಸೂರು- ಮಡಿಕೇರಿ ಹೆದ್ದಾರಿಯ, ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ವಾಹನದಲ್ಲಿದ್ದವರು ಕೊಡಗು ಜಿಲ್ಲೆಯವರಾಗಿದ್ದು, ಸಂಬಂಧಿಕರ ಮದುವೆಗಾಗಿ ಮೈಸೂರಿಗೆ ಆಗಮಿಸಿದ್ದರು. ಮದುವೆ ಮುಗಿಸಿಕೊಂಡು ಪಾಲಿಬೆಟ್ಟ ಕಡೆಗೆ ಬರುತ್ತಿದ್ದಾಗ ಅರಸು ಕಲ್ಲಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ರಾಜೇಶ್, ಅನಿಲ್, ಸಂತೋಷ್, ವಿನುತ್, ದಯಾನಂದ್, ಬಾಬು ಸಾವಿಗೀಡಾಗಿದ್ದು, ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನು ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಪ್ರಯಾಣಿಸುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.