ಹೈವೆಲಿ ಭೀಕರ ಅಪಘಾತ; ಮೂವರು ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಬಲಿ: 8 ಜನರಿಗೆ ಗಂಭೀರ ಗಾಯ

Untitled design - 2025-09-06T140044.623
Published on

ಎಸ್‌ಯುವಿ ಕಾರು ಪಲ್ಟಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಗುಜರಾತ್​ನ ರಾಜ್​ಕೋಟ್​ ಜಿಲ್ಲೆಯ ಹೆದ್ದಾರಿಯಲ್ಲಿ ಶನಿವಾರ(ಸೆ.6) ನಡೆದಿದೆ. ಅಲ್ಲದೆ, ಅಪಘಾತದಲ್ಲಿ 8 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಆಂಧ್ರಪ್ರದೇಶದ ನರೇಶ್ ಕೊಡವತಿ (19), ಮೋತಿ ಹರ್ಷ (17) ಮತ್ತು ಅಫ್ರಿದ್ ಸೈಯದ್ (17) ಎಂದು ಗುರುತಿಸಲಾಗಿದ್ದು, ಎಲ್ಲರೂ ಆಂಧ್ರಪ್ರದೇಶದವರಾಗಿದ್ದಾರೆ ಎಂದು ಅಟ್ಕೋಟ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆರ್.ಎಸ್.ಸಕಾರಿಯಾ ತಿಳಿಸಿದ್ದಾರೆ.

ಜಸ್ಥಾನ್ ತಾಲೂಕಿನ ಜಂಗ್ವಾಡ್​ ಗ್ರಾಮದ ಬಳಿ ಬೆಳಗಿನ ಜಾವ 1.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ವಾಹನ ಚಲಾಯಿಸುತ್ತಿದ್ದ ವಿದ್ಯಾರ್ಥಿಗಳಲ್ಲಿ ಒಬ್ಬನು ತಿರುವಿನಲ್ಲಿ ವಾಹನದ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲಿ ಪಲ್ಟಿಯಾಗಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿ ಗುಂಪೊಂದು ಡಿಯುಗೆ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net