Suitcase : ಪ್ರೇಯಸಿಯನ್ನು ಕೊಂದು ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿ ತುಂಬಿದ್ದ ಘಟನೆ ಮಾಸುವ ಮುನ್ನವೇ ಅಂತಹದೇ ಮತ್ತೊಂದು ಭೀಕರ ಹತ್ಯೆ ಸಿಲಿಕಾನ್ ಸಿಟಿ ಬೆಂಗಳೂರಿನ ಹುಳಿಮಾವು ಪ್ರದೇಶ ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಇದನ್ನೂ ಓದಿ:ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ! | Meteorological
ಮಹಾರಾಷ್ಟ್ರ ಮೂಲದ ಗೌರಿ ಖೇಡೆಲ್ಲರ್ ಅಲಿಯಾಸ್ ಗೌರಿ ಅನಿಲ್ ಸಾಂಬೆಕರ್ (32) ಮೃತ ಗೃಹಿಣಿ. ಈಕೆಯ ಪತಿ ರಾಕೇಶ್ ರಾಜೇಂದ್ರ ಖೇಡೆಲ್ಲರ್ ಎಂಬಾತ ಕೃತ್ಯ ಎಸಗಿದ್ದಾನೆ. ಬನ್ನೇರುಘಟ್ಟ ರಸ್ತೆ ದೊಡ್ಡಕಮ್ಮನಹಳ್ಳಿಯ ಮನೆಯಲ್ಲಿ ಕೃತ್ಯ ನಡೆದಿದ್ದು, ಗುರುವಾರ ಸಂಜೆ 5.30ರಲ್ಲಿ ಕಟ್ಟಡ ಮಾಲೀಕ ನಮ್ಮ-112ಗೆ ಕರೆ ಮಾಡಿದಾಗ ವಿಷಯ ಗೊತ್ತಾಗಿದೆ ಎಂದು ಪೊಲೀಸರು ನೀಡಿದ್ದಾರೆ.
ಖಾಸಗಿ ಕಂಪನಿ ನೌಕರ, ಪತ್ನಿಯನ್ನು ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದಂತೆ ಕೆಲವೇ ತಾಸಿನಲ್ಲಿ ಆರೋಪಿ ಗಂಡನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ; ಲಕ್ಷ್ಮೀ ಹೆಬ್ಬಾಳಯ
ಇತ್ತೀಚೆಗೆ ಕೌಟುಂಬಿಕ ಕಲಹ ಉಂಟಾಗಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪಿ ರಾಕೇಶ್, ಗುರುವಾರ ರಾಕೇಶ್, ಪತ್ನಿಯ ಕಡೆಯವರಿಗೆ ಕರೆ ಮಾಡಿ ಗೌರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಿ ಕರೆ ಕಟ್ ಮಾಡಿದ್ದಾನೆ. ಬೆಚ್ಚಿಬಿದ್ದ ಅವರು, ಕಟ್ಟಡ ಮಾಲೀಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಗ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮಹಿಳೆಯರೆದುರು ವಿಮಾನದಲ್ಲಿ ಯುವಕನ ಹಸ್ತ ಮೈಥುನ; ಮುಂದೇನಾಯ್ತು? |Plane
ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ! | Meteorological