

ಚಂಡೀಗಢ: ನಿಂತಿದ್ದ ಲಾರಿಗೆ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹರಿಯಾಣದ ಪಂಚಕುಲಾದಲ್ಲಿ ನಡೆದಿದೆ.
ಮೃತರನ್ನು ಅಧ್ಯಾಯನ್ ಬನ್ಸಾಲ್, ಅದೀಪ್, ಚಿರಾಗ್ ಮಲಿಕ್ ಮತ್ತು ವೈಭವ್ ಯಾದವ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಪಡೆದು ಪ್ರಕರಣ ದಾಖಲಿಸಿಕೊಂಡಿದ್ಧಾರೆ.
ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪಂಚಕುಲಾದ ಪಿಂಜೋರ್ ತಿಪ್ರಾ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಅಪ ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಎರಡು ದೇಹಗಳು ಕಾರಿನೊಳಗೆ ಸಿಲುಕಿಕೊಂಡಿದ್ದು, ಎರಡು ಗಂಟೆಗಳ ಸತತ ಕಾರ್ಯಾಚರಣೆಯ ಬಳಿ ಹೊರತೆಗೆಯಲಾಯಿತು. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹಗಳನ್ನು ಶವಾಗಾರದಲ್ಲಿ ಇರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ಧಾರೆ.