ಸಾಧಕರನ್ನು ಗೌರವಿಸುವ ಕಾರ್ಯ ಶ್ಲಾಘನೀಯ : ಡಾ.ಹರಿಕೃಷ್ಣ ಪುನರೂರು ಮೆಚ್ಚುಗೆ ಹೊಸ ಅಂಗಣದ ತಿಂಗಳ ಬೆಳಕು ಕಾರ್ಯಕ್ರಮ

New Project (30)
Published on

ಮೂಲ್ಕಿ: ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದು ಯುವ ಸಮಾಜಕ್ಕೆ ಮಾದರಿಯಾಗಿರುವ ವ್ಯಕ್ತಿಗಳನ್ನು ಗೌರವಿಸಿ ಸಮಾಜಕ್ಕೆ ಪರಿಚಯಿಸುವ ಕಾರ್ಯ ಅಭಿನಂದನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಹೇಳಿದರು.

ಮೂಲ್ಕಿಯಲ್ಲಿ ಗುರುವಾರ ಸಂಜೆ ಹೊಸ ಅಂಗಣದ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ, ಸಮಾಜದ ಸಾಧಕರನ್ನು ಗೌರವಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಧಕರ ನೆಲೆಯಲ್ಲಿ ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದ ಅರ್ಚಕ ಶೇಖರ ಪೂಜಾರಿ ಅವರನ್ನು ಗೌರವಿಸಲಾಯಿತು. ಅತಿಥಿಗಳಾಗಿ ಕೇಶವಾನಂದ ಸ್ವಾಮಿ ಚಿತ್ರಾಪು, ಕೆನರಾ ಬ್ಯಾಂಕ್ ಮೂಲ್ಕಿ ಶಾಖಾಧಿಕಾರಿ ಅನಿಲ್ ಮೊರೆ, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಕುಬೆವೂರು, ಮಂಗಳೂರು ಶಾರದಾ ವಿದ್ಯಾಲಯದ ಪ್ರಾಂಶುಪಾಲೆ ಚಂದ್ರಿಕಾ ಭಂಡಾರಿ, ಉದ್ಯಮಿ ವೆಂಕಟೇಶ ಹೆಬ್ಬಾರ್, ಬಂಕಿ ನಾಯಕ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ವೈ.ಎನ್.ಸಾಲ್ಯಾನ್, ಮೂಲ್ಕಿ ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷರಾಜ ಶೆಟ್ಟಿ, ಉದ್ಯಮಿ ಜೋನ್ ಕ್ವಾಡ್ರಾಸ್, ಸಂಘಟಕ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಜಯಪಾಲ ಶೆಟ್ಟಿ ಐಕಳ, ವಿಜಯ ಕುಮಾರ್ ಕುಬೆವೂರು, ಪುಷ್ಪರಾಜ ಚೌಟ, ವಕೀಲ ರವೀಶ್ ಕಾಮತ್, ದಿನೇಶ್ ಶೆಟ್ಟಿ, ಸಾಧು ಅಂಚನ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.

ಡಾ.ಹರಿಶ್ಚಂದ್ರ ಸಾಲ್ಯಾನ್ ಸ್ವಾಗತಿಸಿದರು. ದಿನೇಶ್ ಶೆಟ್ಟಿ ವಂದಿಸಿದರು. ವೈ.ಎನ್.ಸಾಲ್ಯಾನ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net