More

    ಕಾಪು ಹೊಸ ಮಾರಿಗುಡಿ ನಿರ್ಮಾಣ ಶೀಘ್ರ

    ಪಡುಬಿದ್ರಿ: 35 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರಗೊಳ್ಳಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ನೂತನ ಗರ್ಭಗುಡಿ ಹಾಗೂ ಉಚ್ಚಂಗಿ ಅಮ್ಮನ ಗುಡಿ ನಿರ್ಮಾಣ ಕಾರ್ಯದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ತಿಳಿಸಿದರು.

    ಮಾರಿಗುಡಿ ದೇವಸ್ಥಾನದ ನೂತನ ಗರ್ಭಗುಡಿ ಹಾಗೂ ಉಚ್ಚಂಗಿ ಅಮ್ಮನ ಗುಡಿಗೆ ಕಾಪು ಮಜೂರಿನಲ್ಲಿ ಬುಧವಾರ ಆಯೋಜಿಸಿದ ಶಿಲಾ ಮುಹೂರ್ತ ಸಮಾರಂಭದಲ್ಲಿ ಮಾತನಾಡಿ, ಮೊದಲ ಹಂತದಲ್ಲಿ ರೂ.18 ಕೋಟಿ ರೂಪಾಯಿ ಕಾಮಗಾರಿ ಪ್ರಾರಂಭವಾಗಲಿದ್ದು, ಉಳಿದುದನ್ನು ಎರಡನೇ ಹಂತದಲ್ಲಿ ಕೈಗೊಳ್ಳಲಾಗುವುದು ಎಂದರು.

    ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ಕುಮಾರಗುರು ತಂತ್ರಿ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ಶಿಲಾ ಮುಹೂರ್ತದ ಧಾರ್ಮಿಕ ವಿ ಸಂಪನ್ನಗೊಂಡಿತು.

    ಶಾಸಕ ಲಾಲಾಜಿ ಆರ್.ಮೆಂಡನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ, ಗೌರವಾಧ್ಯಕ್ಷ ಅನಿಲ್ ಬಲ್ಲಾಳ್, ಗೌರವ ಸಲಹೆಗಾರರಾದ ಡಾ. ಕೆ. ಪ್ರಭಾಕರ ಶೆಟ್ಟಿ, ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಅಧ್ಯಕ್ಷ ಬಾಲಾಜಿ ಯೋಗೀಶ್ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷ ಅನಿಲ್ ಕುಮಾರ್, ಪ್ರಮುಖರಾದ ಸುಧಾಮ ಶೆಟ್ಟಿ, ಶ್ರೀಕರ ಶೆಟ್ಟಿ, ವಿಕ್ರಂ ಕಾಪು, ರತ್ನಾಕರ ಹೆಗ್ಡೆ, ಶೇಖರ ಸಾಲ್ಯಾನ್, ಜಗದೀಶ್ ಬಂಗೇರ, ಕೆ. ಲೀಲಾಧರ ಶೆಟ್ಟಿ, ಗುತ್ತಿಗೆದಾರ ಸುಜಯ ಕುಮಾರ್ ಶೆಟ್ಟಿ ಕಾರ್ಕಳ ಮೊದಲಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts