More

    ಹೊಸದುರ್ಗದ ಸಮಗ್ರ ಅಭಿವೃದ್ಧಿಗೆ ಆದ್ಯತೆ

    ಹೊಸದುರ್ಗ: ಯಾವುದೇ ರಾಜಕಾರಣ ಮಾಡದೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಹೇಳಿದರು.

    ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ 1.80 ಕೋಟಿ ರೂ. ವೆಚ್ಚದ ಚೆಕ್‌ಡ್ಯಾಂ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

    ಹೊಸದುರ್ಗ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ. ತಾಲೂಕಿನ ಜನರನ್ನೇ ನನ್ನ ಸ್ವಂತ ಕುಟುಂಬ ಎಂದು ಭಾವಿಸಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡುವುದಿಲ್ಲ ಎಂದರು.

    200 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ತಂದಿದ್ದು, ಮುಂದಿನ ಮೂರು ತಿಂಗಳಲ್ಲಿ ರಸ್ತೆ ಮತ್ತಿತರ ಕಾಮಗಾರಿಗಳು ಅನುಷ್ಠಾನಗೊಳ್ಳಲಿವೆ. 50 ಕೋಟಿ ರೂ. ಗೂ ಹೆಚ್ಚಿನ ಹಣವನ್ನು ರಸ್ತೆ ಮತ್ತು ಚೆಕ್‌ಡ್ಯಾಂ ನಿರ್ಮಾಣಕ್ಕೆ ಒದಗಿಸಲಾಗಿದೆ ಎಂದು ತಿಳಿಸಿದರು.

    2008ರಿಂದಲೂ ಚಿಕ್ಕಬ್ಯಾಲದಕೆರೆ ಸೇರಿ ಮತ್ತೋಡು ಹೋಬಳಿಯ ಕೆಲ ಗ್ರಾಮಗಳಿಗೆ ರಸ್ತೆ ಮತ್ತಿತರ ಅಭಿವೃದ್ಧಿ ಕಾರ್ಯಗಳ ಬೇಡಿಕೆ ಇತ್ತು. ಮಂತ್ರಿಯಾದಾಗ ಮಾಡಲು ಸಾಧ್ಯವಾಗದ ಕೆಲಸಗಳನ್ನು ಪ್ರಸ್ತುತ ಅವಧಿಯಲ್ಲಿ ಮಾಡುತ್ತೇನೆ. ತಾಲೂಕಿಗೆ ಹೆಚ್ಚಿನ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಿಎಸ್‌ವೈ ಭರವಸೆ ನೀಡಿದ್ದಾರೆ.

    ಮತ್ತೋಡು ಮತ್ತು ಮಾಡದಕೆರೆ ಹೋಬಳಿಗೆ ವಿವಿ ಸಾಗರದ ಹಿನ್ನೀರಿನ ಮೂಲಕ ಸಂಪರ್ಕ ಕಲ್ಪಿಸಿ ಸೇತುವೆ ನಿರ್ಮಿಸಲು ಸರ್ಕಾರ 54 ಕೋಟಿ ರೂ. ಅನುದಾನ ನೀಡಿದೆ ಎಂದು ತಿಳಿಸಿದರು.ಗ್ರಾಪಂ ಅಧ್ಯಕ್ಷ ಲಿಂಗದೇವರು, ಉಪಾಧ್ಯಕ್ಷೆ ಪುಷ್ಪಾವತಿ, ವಕೀಲ ಸುಹಾಸ್ ಮತ್ತಿತರರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts