More

    ಕೊಬ್ಬರಿ ಖರೀದಿ ಕೇಂದ್ರ ಆರಂಭಿಸಿ

    ಹೊಸದುರ್ಗ: ಸರ್ಕಾರ ಕೂಡಲೇ ಕೊಬ್ಬರಿ ಖರೀದಿ ಕೇಂದ್ರ ಅರಂಭಿಸಿ, ಬೆಂಬಲ ಬೆಲೆಯಲ್ಲಿ ಖರೀದಿಸುವ ವ್ಯವಸ್ಥೆ ಮಾಡಬೇಕು ಎಂದು ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಒತ್ತಾಯಿಸಿದರು.

    ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೆಂಗು ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಕ್ವಿಂಟಾಲ್‌ಗೆ 19 ಸಾವಿರ ರೂಪಾಯಿಂದ ದಿಢೀರ್ 9 ಸಾವಿರ ರೂ.ಗೆ ಕುಸಿದಿದೆ ಎಂದರು.

    ಆದ್ದರಿಂದ ಕೂಡಲೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಬರಬೇಕು. ಎಪಿಎಂಸಿ ಮಾರುಕಟ್ಟೆಯಲ್ಲಿ ಕೊಬ್ಬರಿ ಖರೀದಿ ಕೇಂದ್ರ ಅರಂಭಿಸಬೇಕು ಎಂದು ಹೇಳಿದರು.

    ತಾಲೂಕಿನಲ್ಲಿ ತೆಂಗು ಸೇರಿ ತೋಟಗಾರಿಕೆ ಬೆಳೆಗಳಿಗೆ ರೈತರು ಆಳವಡಿಸಿರುವ ಹನಿ ನೀರಾವರಿಗೆ ತೋಟಗಾರಿಕೆ ಇಲಾಖೆ ಕೃಷಿಕರಿಗೆ ನೀಡಬೇಕಾಗಿದ್ದ 4 ಕೋಟಿ ರೂ. ಸಹಾಯಧನವನ್ನು ಬಾಕಿ ಉಳಿಸಿಕೊಂಡಿದೆ. ರೇಷ್ಮೆ ಮೊಟ್ಟೆ ಸಿಗದೆ ಶೇ.100 ಬೆಳೆ ನಷ್ಟ ರೈತರು ಅನುಭವಿಸಿದ್ದಾರೆ. ಈ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

    ಮಾಜಿ ಶಾಸಕ ಇಳ್ಕಲ್ ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಇಸ್ಮಾಯಿಲ್, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್, ಪುರಸಭಾ ಸದಸ್ಯ ಜಾಫರ್ ಸಾಧಿಕ್, ಅಜ್ಜಪ್ಪ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts