More

    ಬಿರುಗಾಳಿ ಮಳೆಗೆ ಹಕ್ಕಿಪಿಕ್ಕಿ ಜನ ತತ್ತರ

    ಹೊಸದುರ್ಗ: ತಾಲೂಕಿನಲ್ಲಿ ಮಂಗಳವಾರ ಸಂಜೆ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನೂರಾರು ಮರಗಳು ಬುಡ ಸಮೇತ ಉರುಳಿ ಬಿದ್ದಿದ್ದು, ಪಟ್ಟಣದ ಹಕ್ಕಿಪಿಕ್ಕಿ ಕಾಲನಿಯ ವಾಸದ ಶೆಡ್‌ಗಳು ಹಾರಿ ಹೋಗಿ, ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಮುಖ್ಯರಸ್ತೆ ಹಾಗೂ ಹಿರಿಯೂರು ರಸ್ತೆಯಲ್ಲಿದ್ದ ದೊಡ್ಡ, ದೊಡ್ಡ ಮರಗಳು ಗಾಳಿಯ ರಭಸಕ್ಕೆ ನೆಲಕ್ಕುರುಳಿವೆ. ಇದರಿಂದ ವಿದ್ಯುತ್ ತಂತಿ ತುಂಡಾಗಿದೆ. ಬುಧವಾರ ಬೆಳಗ್ಗೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಿತ್ತು.

    ಕಸಬಾ ಹೋಬಳಿಯ ಹೊನ್ನೆಕೆರೆ, ಬಾಗೂರು ಗ್ರಾಮಗಳಲ್ಲಿ ಮನೆ ಮೇಲೆ ತೆಂಗು ಮತ್ತು ಅಡಕೆ ಮರಗಳು ಮುರಿದು ಬಿದ್ದು ನಷ್ಟ ಉಂಟಾಗಿದೆ.

    ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬುಧವಾರ ಬೆಳಗ್ಗೆ ಭೇಟಿ ನೀಡಿದ ಶಾಸಕ ಗೂಳಿಹಟ್ಟಿ ಡಿ.ಶೇಖರ್, ಹಾನಿ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸೂರು ಕಳೆದುಕೊಂಡಿರುವ ಹಕ್ಕಿಪಿಕ್ಕಿ ಸಮುದಾಯದ ಕುಟುಂಬಗಳಿಗೆ ಮನೆಗಳು ದುರಸ್ತಿಯಾಗುವ ತನಕ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts