ಹೊಸದುರ್ಗ: ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಮಾರ್ಗದರ್ಶನ ನೀಡಲು ತರಬೇತಿ ಕೇಂದ್ರ ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಸೋಮವಾರ ಬಿಸಿಎಂ ಇಲಾಖೆ ಆಯೋಜಿಸಿದ್ದ ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಗತ್ಯವಾದ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸತತ ಪರಿಶ್ರಮ ಹಾಗೂ ಶ್ರದ್ಧೆಯಿಂದ ತಯಾರಿ ನಡೆಸಬೇಕು ಎಂದು ಸಲಹೆ ನೀಡಿದರು.
ಬಿಇಒ ಎಲ್.ಜಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಆಸಕ್ತಿಯಿಂದ ಕಲಿತರೆ ಬದುಕು ನಂದನವಾಗುತ್ತದೆ ಎಂದರು.
ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಾ.ಕೆ.ಅನಂತ್, ಪ್ರಾಚಾರ್ಯ ಮಂಜುನಾಥ್, ಡಾ.ಟಿ.ಬಸಪ್ಪ, ಬಿಸಿಎಂ ವಿಸ್ತರಣಾಧಿಕಾರಿ ಕೆ.ಸಿ.ಶಶಿಧರ ಮತ್ತಿತರರಿದ್ದರು.