More

    ಕಡಲೆ ಖರೀದಿ ಪ್ರಮಾಣ ಹೆಚ್ಚಳಕ್ಕೆ ಯತ್ನ

    ಹೊಸದುರ್ಗ: ಕೃಷಿ ಉತ್ಪನ್ನಕ್ಕೆ ಉತ್ತಮ ಬೆಲೆ ಒದಗಿಸುವ ಉದ್ದೇಶದಿಂದ ತಾಲೂಕಿನಲ್ಲಿ ಕಡಲೆಕಾಳು ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ತಿಳಿಸಿದರು.

    ತಾಲೂಕಿನ ಮಲ್ಲಪ್ಪನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಡೆಲೆಕಾಳು ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

    ಕಡಲೆಕಾಳು ಖರೀದಿ ಕೇಂದ್ರದ ಮೂಲಕ ರೈತರು ಬೆಳೆದಿರುವ ಕಡಲೆಕಾಳನ್ನು ಬೆಂಬಲ ಬೆಲೆಗೆ ಖರೀದಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ದರ ಕುಸಿದಿರುವ ಕಾರಣ ಖರೀದಿ ಕೇಂದ್ರದ ಮೂಲಕ ಕ್ವಿಂಟಾಲ್ ಒಂದಕ್ಕೆ 4875 ರೂ. ನಂತೆ ಖರೀದಿಸಲಾಗುತ್ತಿದೆ ಎಂದರು.

    10 ಕ್ವಿಂಟಾಲ್ ಖರೀದಿ ಮಿತಿಯನ್ನು 20 ಕ್ವಿಂಟಾಲ್‌ಗೆ ಹೆಚ್ಚಿಸಬೇಕು ಎನ್ನುವ ರೈತರ ಬೇಡಿಕೆಯನ್ನು ಸರ್ಕಾರದೊಂದಿಗೆ ಚರ್ಚಿಸಲಾಗುವುದ ಎಂದು ತಿಳಿಸಿದರು.

    ಕೃಷಿಕರಿಗೆ ಅನುಕೂಲ ಕಲ್ಪಿಸುವ ಕೆಲಸಗಳಿಗೆ ಹೆಚ್ಚಿನ ಅದ್ಯತೆ ನೀಡಿ ಕೆಲಸ ಮಾಡಲಾಗುವುದು. ರೈತರನ್ನು ಕಚೇರಿಗಳಿಗೆ ಅಲೆದಾಡಿಸದೆ ಕೆಲಸ ಮಾಡಿಕೊಡಬೇಕು, ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಖಚಿತ ಎಂದು ಎಚ್ಚರಿಸಿದರು.

    ಎಪಿಎಂಸಿ ಅಧ್ಯಕ್ಷ ಹೆಬ್ಬಳ್ಳಿ ಮಲ್ಲಿಕಾರ್ಜುನ ಮಾತನಾಡಿ, ರೈತರು ಖರೀದಿ ಕೇಂದ್ರಕ್ಕೆ ಸೂಕ್ತ ದಾಖಲೆಗಳನ್ನು ಸಲ್ಲಿಸಿ ಕಡಲೆಕಾಳು ಮಾರಾಟ ಮಾಡುವ ಮೂಲಕ ಅನುಕೂಲ ಪಡೆದುಕೊಳ್ಳಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts