ಕುಂಚಿಟಿಗರು ಒಬಿಸಿ ಪಟ್ಟಿಗೆ

ಹೊಸದುರ್ಗ: ಕುಂಚಿಟಿಗ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ತಿಳಿಸಿದರು.

ಪಟ್ಟಣದ ಕುಂಚಿಟಿಗ ಮಠಕ್ಕೆ ಬುಧವಾರ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದು ಮಾತನಾಡಿ, ತಾವು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಕುಂಚಿಟಿಗ ಸಮಾಜದ ನಿಯೋಗವನ್ನು ಶ್ರೀಗಳು ದೆಹಲಿಗೆ ಕರೆತಂದು, ಒಬಿಸಿ ಪಟ್ಟಿಗೆ ಸೇರಿಸಲು ಆಗ್ರಹಿಸಿದ್ದರು ಎಂದು ಸ್ಮರಿಸಿದರು.

ದೆಹಲಿ ನಿವಾಸದಲ್ಲಿ ಕೇಂದ್ರ ಸಚಿವರ ಸಭೆ ನಡೆಸಿ ಇದಕ್ಕೆ ಚಾಲನೆ ನೀಡಲಾಗಿತ್ತು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಈ ಕಾರ್ಯಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ಶ್ರೀಗಳು ಕಳೆದ ಎರಡು ದಶಕಗಳಿಂದ ಸಮಾಜಮುಖಿ ಕಾರ್ಯಗಳಿಂದ ಸಮುದಾಯ ಸಂಘಟಿಸುತ್ತಿದ್ದಾರೆ. ಅವರ ಪ್ರಯತ್ನ, ಮಾರ್ಗದರ್ಶನದಲ್ಲಿ ಸಮುದಾಯ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ತಿಳಿಸಿದರು.

ಶ್ರೀ ಶಾಂತವೀರ ಸ್ವಾಮೀಜಿ ಮಾತನಾಡಿ, ಜಿ.ಎಂ.ಸಿದ್ದೇಶ್ವರ್ ಸಚಿವರಾಗಿದ್ದಾಗ ಸಮುದಾಯವನ್ನು ಒಬಿಸಿ ಸೇರ್ಪಡೆ ಯತ್ನಕ್ಕೆ ಸಹಕಾರ ನೀಡಿದ್ದರು. ಈ ಬಾರಿ ಶಕ್ತಿ ಮೀರಿ ಪ್ರಯತ್ನಿಸಿ ಒಬಿಸಿ ಸ್ಥಾನ ದೊರಕಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಘಟಕದ ಖಜಾಂಚಿ ಆರ್.ಡಿ.ಸೀತಾರಾಂ, ಶಿವನಕಟ್ಟೆ ಶಶಿ, ಕಾಡುಗೊಲ್ಲ ಸಮಾಜದ ಅಧ್ಯಕ್ಷ ಧನಂಜಯ, ಪ್ರವೀಣ ಇತರರಿದ್ದರು.

Leave a Reply

Your email address will not be published. Required fields are marked *