More

    ಮರಳು ದಂಧೆಗೆ ಬೆಂಬಲಿಸಿಲ್ಲ

    ಹೊಸದುರ್ಗ: ತಾಲೂಕಿನ ಅಭಿವೃದ್ಧಿ ವಿಚಾರದಲ್ಲಿ ಶಾಸಕರು ರಾಜನೀತಿ, ರಾಜಧರ್ಮ ಪಾಲಿಸಿ ಆರೋಗ್ಯಕರ ಚರ್ಚೆ ಮಾಡುವುದು ಉತ್ತಮ ಎಂದು ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಸಲಹೆ ನೀಡಿದರು.

    ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕೋವಿಡ್-19 ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕೆಲ ದಿನಗಳ ಹಿಂದೆ ಶಾಸಕ ಗೂಳಿಹಟ್ಟಿ ಶೇಖರ್ ನನ್ನ ವಿರುದ್ಧ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ. ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡು ಜನರಿಗೆ ಸೌಲಭ್ಯ ಒದಗಿಸಲೆಂಬ ಉದ್ದೇಶದಿಂದ ಹೇಳಿಕೆ ನೀಡಿದ್ದೇನೆ ವಿನಃ ದುರುದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

    ನಾನು ಕನಕ ಮಠಕ್ಕೆ ಮರಳು ಶೇಖರಿಸಿ ದಂಡ ಕಟ್ಟಿದ್ದೇನೆ ಎಂಬ ಆರೋಪ ಸತ್ಯಕ್ಕೆ ದೂರವಾದುದು. ಸರ್ಕಾರಕ್ಕೆ ರಾಜಧನ ಪಾವತಿಸಿ ಮರಳು ಖರೀದಿಸಲಾಗಿದೆ ಎಂದು ಹೇಳಿದರು.

    ನಾನು ಶಾಸಕನಾಗಿದ್ದ ಮೂರು ಅವಧಿಯಲ್ಲಿ ಮರಳು ದಂಧೆಗೆ ಕಡಿವಾಣ ಹಾಕಲು ಪ್ರಯತ್ನಿಸಿದ್ದು, ಅಂತಹವರಿಂದ ಒಂದು ರೂಪಾಯಿಯನ್ನು ಪಡೆದಿಲ್ಲ. ಈ ಕುರಿತು ಧರ್ಮಸ್ಥಳ ಹಾಗೂ ಹಾಲು ರಾಮೇಶ್ವರ ಕ್ಷೇತ್ರದಲ್ಲಿ ದೀಪ ಹಚ್ಚಿ ಪ್ರಮಾಣ ಮಾಡಿ ಹೇಳುತ್ತೇನೆ. ಈ ಮೂಲಕ ಪ್ರಮಾಣಕ್ಕೆ ಶಾಸಕರಿಗೆ ಆಹ್ವಾನ ನೀಡುತ್ತಿದ್ದೇನೆ. ಇಂತಹ ಹುನ್ನಾರಗಳಿಂದ ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಗೋ.ತಿಪ್ಪೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts