More

    ಕರೊನಾ ನಿರ್ವಹಣೆಗೆ ಕೈ ಸಮಿತಿ ರಚನೆ

    ಹೊಸದುರ್ಗ: ಜಿಲ್ಲೆಯ ಜನರಲ್ಲಿ ಕೋವಿಡ್-19 ಕುರಿತು ಜಾಗೃತಿ ಮೂಡಿಸುವ ಜತೆಗೆ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಹಸ್ತ ಚಾಚುವ ಕೆಲಸವನ್ನು ಕಾಂಗ್ರೆಸ್‌ನಿಂದ ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಕೋವಿಡ್ ನಿರ್ವಹಣಾ ಸಮಿತಿ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ತಿಳಿಸಿದರು.

    ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕೋವಿಡ್-19 ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ಪಕ್ಷದಿಂದ ಕೋವಿಡ್ ನಿರ್ವಹಣಾ ಸಮಿತಿ ರಚಿಸಲಾಗಿದ್ದು, ಬಡವರು, ಕೂಲಿ ಕಾರ್ಮಿಕರಿಗೆ ಅಗತ್ಯ ನೆರವು ನೀಡಲು ಯೋಜಿಸಲಾಗಿದೆ. ಆಹಾರ, ನಿತ್ಯದ ಅಗತ್ಯ ವಸ್ತುಗಳನ್ನು ವಿತರಿಸಲಾಗುವುದು ಎಂದರು.

    ನಿರ್ವಹಣ ಸಮಿತಿಯು ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರಿಗೆ ಪತ್ರ ಬರೆಯುವ ಮೂಲಕ ಹೆಚ್ಚಿನ ದೇಣಿಗೆ ನೀಡಲು ಮನವಿ ಮಾಡಲಾಗಿದೆ. ಕಾರ್ಯಕರ್ತರಿಂದ ದೇಣಿಗೆ ಸಂಗ್ರಹಿಸಿ ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರ ಒದಗಿಸುವುದು ಹಾಗೂ ಜನರಲ್ಲಿ ವೈರಸ್ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜವಳಿ ನಿಗಮದ ಮಾಜಿ ಅಧ್ಯಕ್ಷ ಗೋ.ತಿಪ್ಪೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts