More

    ವಲಸೆ ಕಾರ್ಮಿಕರಿಗೆ ಕೆಲಸ ಕೊಡಿ

    ಹೊಸದುರ್ಗ: ಲಾಕ್‌ಡೌನ್‌ನಿಂದ ಹಳ್ಳಿಗಳಿಗೆ ಹಿಂದಿರುಗಿರುವ ವಲಸೆ ಕಾರ್ಮಿಕರಿಗೆ ಖಾತ್ರಿ ಯೋಜನೆಯಡಿ ಉದ್ಯೋಗ ನೀಡಬೇಕು ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಸೂಚಿಸಿದರು.

    ತಾಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಅಂದಾಜು 18 ಸಾವಿರ ಕಾರ್ಮಿಕರು ತಾಲೂಕಿಗೆ ವಾಪಸಾಗಿದ್ದಾರೆ. ಅವರಿಗೆ ಜಾಬ್‌ಕಾರ್ಡ್ ಜತೆಗೆ ಕಡ್ಡಾಯವಾಗಿ ಕೆಲಸ ನೀಡಬೇಕು. ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

    ಖಾತ್ರಿ ಯೋಜನೆಯಡಿ ಅಕ್ರಮ ನಡೆದರೆ ಪಿಡಿಒಗಳೆ ಹೊಣೆಗಾರರು. ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಬೇಜಾವಾಬ್ದಾರಿ ತೋರಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

    ಶಾಸಕನಾಗಿ ಎರಡು ವರ್ಷವಾದರೂ ಗ್ರಾಪಂ ಮಟ್ಟದಲ್ಲಿ ಪರಿಶೀಲಿಸಿರಲಿಲ್ಲ. ಇದನ್ನು ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳು, ಭ್ರಷ್ಟಾಚಾರ ನಡೆಸುತ್ತಿರುವ ದೂರು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದೇನೆ ಎಂದು ಹೇಳಿದರು.

    ಗ್ರಾಪಂ ಕಚೇರಿಗಳಿಗೆ ಭೇಟಿ ನೀಡುವರ ಮಾಹಿತಿ, ಉದ್ದೇಶ ದಾಖಲಿಸಬೇಕು. ಅಧಿಕಾರಿಗಳು ಕಾರಣ ಹೇಳದೆ ಕಚೇರಿಗೆ ನಿಗದಿತ ಸಮಯಕ್ಕೆ ಹಾಜರಾಗಬೇಕು. ಕಚೇರಿಗೆ ಹಾಜರಾದ, ನಿರ್ಗಮಿಸಿದ ಸಮಯವನ್ನು ಕಡ್ಡಾಯವಾಗಿ ಹಾಜರಾತಿ ಪುಸ್ತಕದಲ್ಲಿ ದಾಖಲಿಸಬೇಕು ಎಂದು ತಿಳಿಸಿದರು.

    ಇಒ ಜಾನಕಿರಾಮ್, ಕೃಷಿ ಎಡಿ ಈಶ್ವರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts