More

    ನವ ಹೊಸದುರ್ಗ ನಿರ್ಮಾಣ ಸಂಕಲ್ಪ

    ಹೊಸದುರ್ಗ: ಮೂಲ ಸೌಲಭ್ಯ ಕಲ್ಪಿಸುವುದು ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನದ ಮೂಲಕ ನವ ಹೊಸದುರ್ಗ ನಿರ್ಮಾಣಕ್ಕೆ ಸಂಕಲ್ಪ ಮಾಡಲಾಗಿದೆ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಹೇಳಿದರು.

    ತಾಲೂಕಿನ ದೇವಿಗೆರೆ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

    ತಾಲೂಕಿನ ಎನ್.ಜಿ.ಹಳ್ಳಿ ಗೇಟ್‌ನಿಂದ ಮಧುರೆ ಗ್ರಾಮದ ವರೆಗೆ 10 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ. ರಾಜ್ಯ ಹೆದ್ದಾರಿ ಪ್ರಾಧಿಕಾರದ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಳಪೆಯಾದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಹೊಣೆಯಾಗಿಸಲಾಗುವುದು ಎಂದು ಎಚ್ಚರಿಸಿದರು.

    ಸಣ್ಣ ನೀರಾವರಿ ಇಲಾಖೆಯಿಂದ ತಾಲೂಕಿನ ಜಲಮೂಲಗಳ ಅಭಿವೃದ್ಧಿಗೆ 30 ಕೋಟಿ ರೂ. ವಿಶೇಷ ಅನುದಾನ ಒದಗಿಸಲಾಗಿದೆ. ಗಾಳಿರಂಗಯ್ಯನಹಟ್ಟಿಯ ರಂಗನಾಥ ಸ್ವಾಮಿ ದೇವಾಲಯದ ಬಳಿ 2 ಕೋಟಿ ರೂ. ವೆಚ್ಚದಲ್ಲಿ ಇಂಗುಕೆರೆ ನಿರ್ಮಾಣ ಹಾಗೂ ದಶರಥ ರಾಮೇಶ್ವರ ವಜ್ರದಲ್ಲಿ ಹಳ್ಳಕ್ಕೆ ಸೋಪಾನ ನಿರ್ಮಾಣ ಮಾಡಲಾಗುವುದು ಎಂದರು.

    ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್, ಎಪಿಎಂಸಿ ಅಧ್ಯಕ್ಷ ಎಚ್.ಸಿ.ಮಲ್ಲಿಕಾರ್ಜುನ್ ಹೆಬ್ಬಳ್ಳಿ, ರಾಮೇಗೌಡ, ಪ್ರವೀಣ, ಪ್ರಭುದೇವ್, ಮಲ್ಲಿಕಾರ್ಜುನ್ ಬೀಸನಹಳ್ಳಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts