More

    ಅನುದಾನ ದುರ್ಬಳಕೆಗೆ ಕ್ರಮ ಖಚಿತ

    ಹೊಸದುರ್ಗ: ಗ್ರಾಮ ಪಂಚಾಯಿತಿಗಳ 14ನೇ ಹಣಕಾಸು ನಿಧಿಯ ಹಣ ದುರ್ಬಳಕೆಯಾದರೆ ಸಂಬಂಧಿಸಿದ ಗ್ರಾಪಂ ಪಿಡಿಒಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಎಚ್ಚರಿಸಿದರು.

    ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ತಾಲೂಕಿನ ಕೇಲ ಪಂಚಾಯಿತಿಗಳಲ್ಲಿ 14ನೇ ಹಣಕಾಸು ನಿಧಿಯ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ದೂರುಗಳು ಕೇಳಿಬರುತ್ತಿವೆ. ಯಾವುದೇ ಕಾಮಗಾರಿ ನಡೆಸದೆ ಸುಳ್ಳು ದಾಖಲೆ ಸೃಷ್ಟಿಸಿ ಹಣ ಡ್ರಾ ಮಾಡಲಾಗಿದೆ. ಇಂತಹ ಪ್ರಕರಣಗಳಲ್ಲಿ ಪಿಡಿಒಗಳನ್ನೇ ಹೊಣೆಯಾಗಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

    ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಪಟ್ಟಣದಿಂದ ಹಳ್ಳಿಗಳಿಗೆ ಹಿಂದಿರುಗಿರುವ ಜನರಿಗೆ ಉದ್ಯೋಗ ನೀಡಬೇಕು. ಸಾಮೂಹಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಖಾತ್ರಿ ಯೋಜನೆಯ ಜಾಬ್ ಕಾರ್ಡ್‌ಗಳನ್ನು ಕಡ್ಡಾಯವಾಗಿ ಫಲಾನುಭವಿಗಳಿಗೆ ನೀಡಬೇಕು ಎಂದರು.

    ಕೇಂದ್ರ ಸರ್ಕಾರ ಪ್ರತಿ ಕುಟುಂಬಕ್ಕೂ 365 ದಿನವೂ ಕುಡಿವ ನೀರು ಒದಗಿಸಲು ಯೋಜನೆ ರೂಪಿಸಿದ್ದು, ಇದಕ್ಕೆ ಅಗತ್ಯ ಕುಟುಂಬಗಳ ಸಮೀಕ್ಷೆ ಮಾಡಿ ನಿಖರ ಮಾಹಿತಿ ಒದಗಿಸಬೇಕು. ಸರ್ಕಾರ ಸಮೀಕ್ಷೆ ಮಾಹಿತಿ ಆಧರಿಸಿ ಕುಡಿವ ನೀರಿನ ಯೋಜನೆ ಅನುಷ್ಠಾನಗೊಳಿಸಲಿದೆ ಎಂದು ತಿಳಿಸಿದರು.

    ತಾಪಂ ಇಒ ಜಾನಕಿರಾಮ್, ಎಇಇ ನಾಗರಾಜ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts