26.8 C
Bangalore
Friday, December 13, 2019

ದೈವತ್ವದೆಡೆ ಕರೆದೊಯ್ಯುವುದೇ ಹಬ್ಬಗಳ ಉದ್ದೇಶ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಹೊಸದುರ್ಗ: ಮಾನವರನ್ನು ಆತ್ಮ ಸಾಕ್ಷಾತ್ಕಾರದ ಮೂಲಕ ದೈವತ್ವದೆಡೆಗೆ ಕರೆದೊಯ್ಯುವುದು ಶಿವರಾತ್ರಿ ಸೇರಿ ಎಲ್ಲ ಹಬ್ಬಗಳ ಉದ್ದೇಶವಾಗಿದೆ ಎಂದು ಡಾ. ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಸಾಣೇಹಳ್ಳಿಯ ತರಳಬಾಳು ಶಾಖಾ ಮಠದಲ್ಲಿ ಆಯೋಜಿಸಿದ್ದ ಶರಣರ ಕಲ್ಪನೆಯಲ್ಲಿ ಶಿವರಾತ್ರಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲುವ ಸಂಕಲ್ಪ ಮಾಡುವುದೇ ಶಿವರಾತ್ರಿ ಜಾಗರಣೆ ಮಹತ್ವ ಎಂದರು.
ಹಬ್ಬಗಳು ಕೇವಲ ಸ್ನಾನ, ಪೂಜೆ, ಬಾಹ್ಯ ಆಚರಣೆ, ಲಾಂಛನ ವಿಜೃಂಭಣೆಗೆ ಸೀಮಿತಗೊಳ್ಳುತ್ತಿವೆ. ಅಂತರಂಗ ಶುದ್ಧಿಯಿಲ್ಲದೇ ಆಡಂಬರ ಆಚರಣೆಯಿಂದ ಪ್ರಯೋಜನವಿಲ್ಲ. ಜಾಗರಣೆ ಹೆಸರಲ್ಲಿ ಸಿನೆಮಾ, ಮನರಂಜನೆ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಮಠಮಾನ್ಯಗಳು ಅದಕ್ಕೆ ಪ್ರೋತ್ಸಾಹ ನೀಡುತ್ತಿರುವುದು ದುರದೃಷ್ಟಕರ ಎಂದರು.
ಶಿವ ಎಂಬುದು ಪೌರಾಣಿಕ ಕಲ್ಪನೆ ಮುಕ್ಕಣ್ಣನಲ್ಲ. ಒಳಿತು, ಲೇಸು, ಮಂಗಳ, ಶುಭ ಎಂದರ್ಥ. ಅಂತರಂಗದಲ್ಲಿ ಜ್ಞಾನದ ಜ್ಯೋತಿ ಬೆಳಗಿ ಅಜ್ಞಾನದ ಕತ್ತಲೆ ಕಳೆಯುವುದೇ ಶಿವರಾತ್ರಿ ಆಚರಣೆ. ವಚನ ಹೇಳುವ, ಆಲಿಸುವ ಸತ್ಸಂಗದ ಮೂಲಕ ಶಿವರಾತ್ರಿ ಆಚರಿಸಬೇಕು ಎಂದರು.
ಬಿಇಒ ಎಲ್.ಜಯಪ್ಪ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಯನ್ನು ಶಿಕ್ಷಣ ತಜ್ಞರು ಕಲಿಕೆ, ಜ್ಞಾನ, ಭಾವನೆ ಮತ್ತು ಕಾರ್ಯದಕ್ಷತೆ ಆಧಾರದಲ್ಲಿ ಗುರುತಿಸುತ್ತಾರೆ ಪ್ರಸ್ತುತ ಶಿಕ್ಷಣ ಕೇವಲ ಕಲಿಕೆ, ಅಂಗ ಗಳಿಕೆಗೆ ಸೀಮಿತವಾಗಿದೆ. ಮಕ್ಕಳ ಪ್ರಗತಿಯಲ್ಲಿ ಅಸಮತೋಲನ ಕಾಣುತ್ತಿದೆ ಎಂದರು.
ಸಾಣೇಹಳ್ಳಿಯ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ದೊರೆಯುತ್ತಿರುವ ಹಿನ್ನೆಲೆ ಅವರು ಬುದ್ಧಿವಂತರು, ಹೃದಯವಂತರು ಮತ್ತು ಕಾಯಕಶೀಲರಾಗಿದ್ದಾರೆ ಎಂದರು.
ಪ್ರಾರ್ಥನೆ, ಧ್ಯಾನ, ಸಂಗೀತ, ನೃತ್ಯ ರೂಪಕ, ವಚನ ಅನುಸಂಧಾನದ ಮೂಲಕ ಶಿವರಾತ್ರಿ ಆಚರಿಸಿದರು. 70 ನಿಮಿಷಗಳ ಕಾಲ 110 ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ, ನೀನಲ್ಲದೆ ಮತ್ತಾರು ಇಲ್ಲವಯ್ಯ ಎಂಬ ವಚನ ನೃತ್ಯ ರೂಪಕ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು.
ರಂಗ ನಿರ್ದೇಶಕ ವೆಂಕಟೇಶ್, ಡಾ.ಮಲ್ಲೇಶ್, ಎಸ್.ಸಿದ್ದಪ್ಪ, ಎ.ಸಿ. ಚಂದ್ರಣ್ಣ ಇತರರಿದ್ದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....