ಹೊಸದುರ್ಗ: ರಾಹುಲ್ ಗಾಂಧಿ ಜನ್ಮದಿನದ ಪ್ರಯುಕ್ತ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಚಾಲನೆ ನೀಡಿದರು.
ನಂತರ ಮಾತನಾಡಿ, ದೇಶದ ಪ್ರಗತಿಯಲ್ಲಿ ಕಾಂಗ್ರೆಸ್ ಪಕ್ಷದ ಶ್ರಮ ಹೆಚ್ಚಾಗಿದೆ. ರಾಜ್ಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಪಕ್ಷಕ್ಕೆ ಆನೆ ಬಲ ಬಂದಿದೆ. ಯುವಕರನ್ನು ಪಕ್ಷಕ್ಕೆ ಆಹ್ವಾನಿಸಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸಲಾಗುವುದು ಎಂದರು.
ಜವಳಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಗೋ.ತಿಪ್ಪೇಶ್ ಮಾತನಾಡಿ, ಕಾಂಗ್ರೆಸ್ ಜನಸಾಮಾನ್ಯರ ಪಕ್ಷ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಇಸ್ಮಾಯಿಲ್, ರಾಜಪ್ಪ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಾ.ಕೆ.ಅನಂತ್, ಪುರಸಭೆ ಸದಸ್ಯ ಜಾಫರ್ ಸಾದಿಕ್, ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಇದ್ದರು.