More

    ಛಲ ಯುವ ಪೀಳಿಗೆಗೆ ಆದರ್ಶವಾಗಬೇಕು

    ಹೊಸದುರ್ಗ: ಸತತ ಪ್ರಯತ್ನದಿಂದ ದೇವಗಂಗೆಯನ್ನು ಧರೆಗಿಳಿಸಿದ ಭಗೀರಥ ಮಹರ್ಷಿಯ ಏಕಾಗ್ರತೆ ಹಾಗೂ ಛಲ ಯುವಪೀಳಿಗೆಗೆ ಆದರ್ಶವಾಗಬೇಕು ಎಂದು ಭಗೀರಥ ಮಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು.

    ತಾಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಹಾಗೂ ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ಭಗೀರಥ ಮಹರ್ಷಿಯ ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

    ಮಹರ್ಷಿಯು ಸತತ ತಪ್ಪಸ್ಸಿನಿಂದ ಪರಶಿವನನ್ನು ಒಲಿಸಿಕೊಂಡು ದೇವಗಂಗೆಯನ್ನು ಭೂಮಿಗೆ ತಂದು ತನ್ನ ಪೂರ್ವಜರಿಗೆ ಸದ್ಗತಿ ನೀಡುವ ಮೂಲಕ ಉಪ್ಪಾರ ಸಮುದಾಯದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.

    ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಉಪ್ಪಾರ ಸಮುದಾಯದ ಯುವ ಜನತೆ ಶೈಕ್ಷಣಿಕ ಪ್ರಗತಿಯೊಂದಿಗೆ ಸಮಾಜದ ಮುಖ್ಯವಾಹಿನಿ ಪ್ರವೇಶಿಸಬೇಕು. ಭಗೀರಥ ಮಹರ್ಷಿ ಸೇರಿದಂತೆ ಸಮುದಾಯದ ಸಂಸ್ಕೃತಿ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

    ಶಾಸಕ ಗೂಳಿಹಟ್ಟಿ ಡಿ.ಶೇಖರ್ ಮಾತನಾಡಿ, ಭಗೀರಥ ಮಹರ್ಷಿ ಆದರ್ಶಗಳನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಉಪ್ಪು ತಯಾರಿಸುವ ಮೂಲಕ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಉಪ್ಪಾರ ಸಮುದಾಯ ಇತರ ಸಮಾಜಗಳಿಗೆ ಆದರ್ಶವಾಗಿದೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು.

    ಜಿಪಂ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್, ತಾಪಂ ಸದಸ್ಯ ಮಲ್ಲಿಕಾರ್ಜುನ್, ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಮಂಜುನಾಥ್, ಗುರುಮೂರ್ತಿ, ರಮೇಶ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts