ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಆದ್ಯತೆ

ಹೊಸದುರ್ಗ: ತಾಲೂಕಿನ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಶಾಸಕ ಗೂಳಿಹಟ್ಟಿ ಡಿ. ಶೇಖರ್ ತಿಳಿಸಿದರು.

ಪಟ್ಟಣದ ತೋಟದ ರಾಮಯ್ಯ ಬಾಲಿಕಾ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ರಕ್ಷಣಾ ಗೋಡೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಶಾಲೆಯ ರಕ್ಷಣಾ ಗೋಡೆ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 10 ಲಕ್ಷ ರೂ. ಅನುದಾನ ನೀಡಲಾಗಿದೆ. ಕುಡಿವ ನೀರು ಮತ್ತಿತರ ಮೂಲ ಸೌಲಭ್ಯ ಒದಗಿಸಲಾಗುವುದು. ಶೈಕ್ಷಣಿಕ ವ್ಯವಸ್ಥೆ ಬಲಪಡಿಸುವ ಕಾರ್ಯಕ್ಕೆ ಪಾಲಕರು ಕೈಜೋಡಿಸಬೇಕು ಎಂದು ಕೋರಿದರು.

ನೊಳಂಬ ವೀರಶೈವ ಸಮಾಜ, ವೀರಶೈವ ಸಮಾಜ ಮತ್ತಿತರ ಸಮುದಾಯದವರು ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಅಗತ್ಯ ಅನುದಾನ ಕೋರಿ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ವೀರಶೈವ ಮಹಾಸಭಾದ ತಾಲೂಕಾಧ್ಯಕ್ಷ ಬಿ.ಪಿ.ಓಂಕಾರಪ್ಪ ಮಾತನಾಡಿ, ಶಾಸಕರ ನಿಧಿಯಿಂದ ಶಾಲೆಯ ಅಭಿವೃದ್ಧಿಗೆ ಅನುದಾನ ಒದಗಿಸಿರುವುದು ಉತ್ತಮ ಕಾರ್ಯ. ಶಾಲೆಗಳೇ ನಿಜ ದೇಗುಲಗಳು. ಶೈಕ್ಷಣಿಕ ಅಭಿವೃದ್ಧಿಯೇ ಸಮಾಜದ ಅಭಿವೃದ್ಧಿ ಎಂದರು.

ಪುರಸಭೆ ಸದಸ್ಯೆ ಗೀತಾ, ಜಿಪಂ ಮಾಜಿ ಸದಸ್ಯ ಎಂ.ಲಕ್ಷ್ಮಣ್, ನಿವೃತ ಇಂಜಿನಿಯರ್ ಮಲ್ಲಿಕಾರ್ಜುನಪ್ಪ, ಒಪ್ಪತ್ತಿನಸ್ವಾಮಿ ಬ್ಯಾಂಕ್ ಅಧ್ಯಕ್ಷ ಸಿದ್ದಪ್ಪ, ಪ್ರಭುದೇವ್, ಜಾನಕಲ್ ತಿಪ್ಪಣ್ಣ ಇತರರಿದ್ದರು.

Leave a Reply

Your email address will not be published. Required fields are marked *