More

    ಸರ್ಕಾರ ವಿರುದ್ಧ ಗೂಳಿ ಗುಟರು

    ಹೊಸದುರ್ಗ: ಅಧಿಕಾರಿಗಳ ವರ್ಗಾವಣೆ ಮಾಡುವಾಗ ಸರ್ಕಾರ ಜಿಲ್ಲೆಯ ಶಾಸಕರ ಮಾತಿಗೆ ಮನ್ನಣೆ ನೀಡುತ್ತಿಲ್ಲ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಸ್ಪಿ ವರ್ಗಾವಣೆ ವಿಚಾರದಲ್ಲಿ ಬಿಜೆಪಿಯ ನಾಲ್ಕು ಶಾಸಕರ ಮನವಿಗೆ ಮನ್ನಣೆ ನೀಡಿಲ್ಲ ಎಂದು ಪಟ್ಟಣದ ಕಚೇರಿಯಲ್ಲಿ ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.

    ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಮುಖಂಡರು ತಮಗೆ ಅನುಕೂಲವಾಗುವ ಅಧಿಕಾರಿಗಳನ್ನು ಜಿಲ್ಲೆಗೆ ತಂದು ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರು. ಆಗ ಅಸಹಾಯಕತೆಯಿಂದ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೆ. ನಮ್ಮ ನೋವು ಅರ್ಥ ಮಾಡಿಕೊಳ್ಳದ ಬಿಜೆಪಿ ಸರ್ಕಾರ ಕೂಡ ಕಾಂಗ್ರೆಸ್ ಮುಖಂಡರಿಗೆ ಅನುಕೂಲವಾಗುವಂಥ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ಎಂದು ದೂರಿದರು.

    ನಮ್ಮ ಮನವಿ ಆಲಿಸದ ಸರ್ಕಾರ ದಾವಣಗೆರೆ ಜಿಲ್ಲೆಯ ಶಾಸಕರೊಬ್ಬರ ಆಣತಿಯಂತೆ ಅವರಿಗೆ ಬೇಕಾದ ಅಧಿಕಾರಿಗಳನ್ನು ನೀಡಿದೆ. ಸಣ್ಣಪುಟ್ಟ ಪ್ರಕರಣಗಳಿಗೂ ಅಧಿಕಾರಿಗಳು ಮೂಗು ತೂರಿಸುತ್ತಾರೆ. ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಅಮಾಯಕರು ಸಮಸ್ಯೆಗೆ ಸಿಲುಕುವಂತಾಗಿದೆ ಎಂದು ಅಳಲು ತೋಡಿಕೊಂಡರು.

    ಎಸ್ಪಿ ವರ್ಗಾವಣೆ ಕುರಿತಂತೆ ಗೃಹಸಚಿವರಿಗೆ ಕರೆ ಮಾಡಿದರೂ ಸ್ಪಂದಿಸಿಲ್ಲ. ಈ ಬಗ್ಗೆ ಬೇರೆಯವರು ಮಾತನಾಡುತ್ತಿಲ್ಲ, ನಾನು ಮಾತನಾಡಿದ್ದೇನೆ. ಮುಂದಿನ ಬೆಳವಣಿಗೆಯನ್ನು ಕಾದು ನೋಡಲಿ ಎಂದು ಎಂದು ಮಾರ್ಮಿಕವಾಗಿ ಹೇಳಿದರು.

    ಜಾಲತಾಣದಲ್ಲಿ ಆಕ್ರೋಶ: ಎಸ್ಪಿ ವರ್ಗಾವಣೆ ಆದೇಶ ಶುಕ್ರವಾರ ಸಂಜೆ ಹೊರ ಬರುತ್ತಲೇ ಶಾಸಕ ಗೂಳಿಹಟ್ಟಿ ಶೇಖರ್ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ನಡೆ ಖಂಡಿಸಿ ವಾಟ್ಸ್‌ಆ್ಯಪ್ ಹಾಗೂ ಫೇಸ್‌ಬುಕ್ ಡಿಪಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದರು. ಇದು ಟ್ರೋಲ್ ಹಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts