More

    ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸುವಂತೆ ಕಲಾವಿದರ ಒಕ್ಕೂಟ ಒತ್ತಾಯ

    ಹೊಸಪೇಟೆ: ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸದಸ್ಯರು ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿಗೆ ನಗರದ ಭಾವೈಕ್ಯತಾ ವೇದಿಕೆ ಆವರಣದಲ್ಲಿ ಸೋಮವಾರ ಮನವಿ ಸಲ್ಲಿಸಿದರು.

    ಕೊಪ್ಪಳದಲ್ಲಿ ಡಾ.ಸಿದ್ದಯ್ಯ ಪುರಾಣಿಕರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಬೇಕು. ಆಂಧ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದ ಎಲ್ಲ ಕಲಾವಿದರಿಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಗುರುತಿನ ಚೀಟಿ ವಿತರಿಸಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಸಾಂಸ್ಕೃತಿಕ ಉದ್ದೇಶಕ್ಕೆ ಕ್ರಿಯಾಯೋಜನೆ ರೂಪಿಸಿ, ಏಳು ಜಿಲ್ಲೆಗಳಲ್ಲಿ ಜಿಲ್ಲಾ ಉತ್ಸವಗಳನ್ನು ಆಚರಿಸಬೇಕು. ಹಂಪಿ ಉತ್ಸವ ಮಾದರಿಯಲ್ಲಿ ಈ ಭಾಗದ ಐತಿಹಾಸಿಕ ಕ್ಷೇತ್ರಗಳ ಉತ್ಸವಗಳನ್ನು ನಡೆಸಬೇಕು ಎಂದು ಒತ್ತಾಯಿಸಿದರು.

    ರಾಜ್ಯದ ಪದ್ಮಭೂಷಣ, ಪದ್ಮಶ್ರೀ, ರಾಜ್ಯೋತ್ಸವ ಪುರಸ್ಕೃತ ಕಲಾವಿದರಿಗೆ ನಿರಂತರವಾಗಿ 10 ಸಾವಿರ ರೂ. ಮಾಸಾಶನ ನೀಡಬೇಕು. ಸರ್ಕಾರದಿಂದ ಬಸ್ ಪಾಸ್ ವಿನಾಯಿತಿ ಹಾಗೂ ವಿಮೆ ಯೋಜನೆ ರೂಪಿಸಬೇಕು. ಕಲಾ ಪ್ರದರ್ಶನಕ್ಕಾಗಿ ವಿಜಯನಗರ ಜಿಲ್ಲೆಯಲ್ಲಿ ಶ್ರೀಕೃಷ್ಣ್ಣದೇವರಾಯ ಕಲಾಭವನ ನಿರ್ಮಾಣ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಜಂಟಿ ನಿರ್ದೇಶಕರ ಕಚೇರಿಯನ್ನು ಸ್ಥಾಪಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.

    ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸರದಾರ ಬಾರಿಗಿಡ, ಹಿರಿಯ ಕಲಾವಿದ ಎಸ್.ಚಂದ್ರು, ಕಲಾವಿದರಾದ ಅಂಜಲಿ, ಅರುಣ್‌ಕುಮಾರ್ ಮೇದಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts