More

    ಟೀಕಿಸುವವರಿಗೆ ಕೆಲಸದಿಂದಲೇ ಉತ್ತರ ನೀಡುವೆ: ಮಾಜಿ ಸಂಸದ ಉಗ್ರಪ್ಪ ಹೇಳಿಕೆಗೆ ಸಚಿವ ಆನಂದ ಸಿಂಗ್ ಟಾಂಗ್

    ಹೊಸಪೇಟೆ: ನೂತನ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಟೀಕಿಸುವವರಿಗೆ ಕೆಲಸದ ಮೂಲಕವೇ ಉತ್ತರ ನೀಡಲಾಗುವುದು ಎಂದು ಸಚಿವ ಆನಂದ ಸಿಂಗ್ ಹೇಳಿದರು.

    ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು. ಹೊಸ ಜಿಲ್ಲೆ ರಚಿಸುವ ಭರದಲ್ಲಿ ವಿಜಯನಗರ ಮತ್ತೊಂದು ಯಾದಗಿರಿ, ರಾಮನಗರ, ಚಿಕ್ಕಬಳ್ಳಾಪುರ ಆಗಬಾರದು ಎಂದಿದ್ದ ಮಾಜಿ ಸಂಸದ ಉಗ್ರಪ್ಪ ಹೇಳಿಕೆಗೆ ಸಚಿವರು ಹೆಸರೇಳದೆ ಟಾಂಗ್ ನೀಡಿದರು. ಮಾಹಿತಿ ಕೊರತೆಯಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅಭಿವೃದ್ಧಿಗೆ ಐದು ಸಾವಿರ ಕೋಟಿ ರೂ. ಮೀಸಲಿಡಬೇಕೆಂದು ಹೇಳುತ್ತಿದ್ದಾರೆ. ಖನಿಜ ನಿಧಿಯಲ್ಲಿ 13 ಸಾವಿರ ಕೋಟಿ ರೂ.ಗೂ ಅಧಿಕ ಹಣವಿದ್ದು, ಅದನ್ನು ಬಳಸಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ. ಈ ಹಣದಲ್ಲಿ ಎರಡೂ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದರು.

    ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಎನ್.ಎಲ್.ನರೇಂದ್ರಬಾಬು ಮಾತನಾಡಿ, 2013ರಲ್ಲಿ ಆರಂಭಗೊಂಡಿರುವ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ, ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಣ ಸಂಸ್ಥೆ, ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಶ್ರಮಿಸುತ್ತಿದೆ. ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು. ಕೇಂದ್ರದಲ್ಲಿ ಅಟಲ್ ಜೀ ಹಾಗೂ ಆಡ್ವಾಣಿಯವರು, ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ಹಕ್ಕಬುಕ್ಕರಂತೆ ಸಾಮ್ರಾಜ್ಯ ಕಟ್ಟಿದ್ದಾರೆ. ಅದೇರೀತಿ ನಾವೆಲ್ಲರೂ ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು ಎಂದರು.

    ಒಬಿಸಿ ಮೋರ್ಚಾದ ರಾಜ್ಯ ಪ್ರ.ಕಾರ್ಯದರ್ಶಿ ಉಮೇಶ ಸಜ್ಜನ್ ಮಾತನಾಡಿದರು. ಜಿಲ್ಲಾ ಪ್ರ.ಕಾರ್ಯದರ್ಶಿ ಅನಿಲ್ ಕುಮಾರ ನಾಯ್ಡು, ಜಿಲ್ಲಾಧ್ಯಕ್ಷ ಅಯ್ಯಳ್ಳಿ ತಿಮ್ಮಪ್ಪ, ಪ್ರಮುಖರಾದ ಈ.ಟಿ. ಲಿಂಗರಾಜ, ಧನಂಜಯ ಇದ್ದರು.

    ನೀರಾವರಿ ಸಮಸ್ಯೆ ನಿವಾರಿಸುವೆ
    ಸಿಎಂ ಬಿ.ಎಸ್.ಯಡಿಯೂರಪ್ಪ ಚುನಾವಣೆ ವೇಳೆ ಕೊಟ್ಟಿದ್ದ ಮಾತು ಉಳಿಸಿಕೊಂಡು ಸುವರ್ಣಾಕ್ಷರದಲ್ಲಿ ಬರೆದಿಡುವಂತೆ ಮಾಡಿದ್ದಾರೆ. ನೂತನ ಜಿಲ್ಲೆ ಕೆಲಸಗಳು ವೇಗವಾಗಿ ನಡೆಯುತ್ತಿವೆ. ವಿಶೇಷಾಧಿಕಾರಿ, ಮೇಲುಸ್ತುವಾರಿ ನೇಮಿಸಲಾಗಿದೆ. ಮುಂದೆ ಜಿಲ್ಲಾ ಕೇಂದ್ರದಲ್ಲಿ ಯಾವ ಇಲಾಖೆ ಕಚೇರಿ ಎಲ್ಲಿ ನಿರ್ಮಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು. ಪಶ್ಚಿಮ ತಾಲೂಕುಗಳ ಏತ ನೀರಾವರಿ ಹಾಗೂ ಕುಡಿವ ನೀರಿನ ಸಮಸ್ಯೆ ಈ ವರ್ಷವೇ ನಿವಾರಿಸಲಾಗುವುದು ಎಂದು ಸಚಿವ ಆನಂದ ಸಿಂಗ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts