More

    ಸಂಪತ್ತಿಗಿಂತ ಆರೋಗ್ಯಕ್ಕೆ ಹೆಚ್ಚು ಬೆಲೆ – ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಅಭಿಮತ

    ಹೊಸಪೇಟೆ: ಜನರಲ್ಲಿ ಎಷ್ಟೇ ಸಂಪತ್ತಿದ್ದರೂ ಅನುಭವಿಸಲು ಆರೋಗ್ಯವೇ ಇಲ್ಲವಾದರೆ ಎಲ್ಲವೂ ಶೂನ್ಯವಾಗುತ್ತದೆ. ಆರೋಗ್ಯಕ್ಕೇ ಹೆಚ್ಚು ಬೆಲೆ ಇದೆ ಎಂದು ಸಚಿವ ಆನಂದ ಸಿಂಗ್ ಹೇಳಿದರು.

    ನಗರದ ರೋಟರಿ ಸಭಾಂಗಣದಲ್ಲಿ ಮಂಗಳವಾರ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಇನ್ಫೋಸಿಸ್, ಮೆ ಎಡ್ಜ್‌ವರ್ವ್ ಸಿಸ್ಟಮ್ಸ್ ಲಿಮಿಟೆಡ್, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಪುಷ್ಟಿ ಯೋಜನೆಯಡಿ ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆ ಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶ ಮಿಶ್ರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಹಿರಿಯರು ಆಶೀರ್ವಾದ ಮಾಡುವ ವೇಳೆ ನೂರು ಕಾಲ ಬಾಳು ಎಂದು ಆಶಿಸುತ್ತಿದ್ದರು. ಏಕೆಂದರೆ ಆರೋಗ್ಯ ಸರಿಯಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದನ್ನು ಅವರು ಅರಿತಿದ್ದರು. ಹೀಗಾಗಿ ಪ್ರತಿಯೊಬ್ಬರೂ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ವಿಶೇಷವಾಗಿ ಮಕ್ಕಳ ಆರೋಗ್ಯ ವೃದ್ಧಿಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಾಗರಾಜ ಮಾತನಾಡಿ, ವಿಜಯನಗರ ಜಿಲ್ಲೆಯಲ್ಲಿ 243 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ ನಿವಾರಣೆಗೆ ಪುಷ್ಟಿ ಯೋಜನೆ ಸಹಕಾರಿಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಪೌಷ್ಟಿಕ ಮಿಶ್ರಣ ನೀಡುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.

    ಆಯುಷ್ ಇಲಾಖೆ ವೈದ್ಯ ಮುನಿವಾಸುದೇವ ರೆಡ್ಡಿ, ಚೇಂಬರ್ ಆಫ್ ಕಾಮರ್ಸ್ ನ ಅಶ್ವಿನ್ ಕೋತಂಬರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts