More

    ಆಗಸ್ಟ್ ಅಂತ್ಯದೊಳಗೆ ವೇತನ ಆಯೋಗ ರಚನೆ; ಮುಖ್ಯಮಂತ್ರಿ ಸಮ್ಮತಿ – ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿಕೆ

    ಹೊಸದುರ್ಗ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿ ಸೂಚಿಸಿದ್ದು, ಆಗಸ್ಟ್ ಅಂತ್ಯದೊಳಗೆ ಆಯೋಗ ರಚನೆಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

    ಪಟ್ಟಣದ ಸರ್ಕಾರಿ ನೌಕಕರ ಭವನದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

    ಶೀಘ್ರದಲ್ಲಿಯೇ ಸರ್ಕಾರಿ ನೌಕರರ ವೇತನ ಹೆಚ್ಚಳವಾಗಲಿದ್ದು, ನೌಕರರ ಹಿತರಕ್ಷಣೆ ಮಾಡುವಲ್ಲಿ ರಾಜ್ಯ ಸಂಘ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಅಧ್ಯಕ್ಷನಾದ ನಂತರ ಸಂಘದ ಕಾರ್ಯ ಚಟುವಟಿಕೆಯಲ್ಲಿ ಪಾರದರ್ಶಕತೆ ಮೂಡಿಸುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

    ಸಂಘಟನೆಯಲ್ಲಿ ಶಿಸ್ತು ತರುವ ಜತೆಗೆ ಸಂಘದ ಲೆಕ್ಕವನ್ನು ಪ್ರತಿ ಸದಸ್ಯನಿಗೂ ತಿಳಿಸುವ ಮೂಲಕ ಆರ್ಥಿಕ ಶಿಸ್ತಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ರಾಜ್ಯ ಸಂಘ ಸದಸ್ಯರ ನಂಬಿಕೆ ಉಳಿಸಿಕೊಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

    ಅಧಿಕಾರ ಹಂಚಿಕೆ ಪದ್ಧತಿ ರದ್ದು:
    ಸಂಘದ ಅಧ್ಯಕ್ಷ ಸ್ಥಾನದ ಅಧಿಕಾರವನ್ನು ಹಂಚಿಕೆ ಮಾಡುವ ಪದ್ಧತಿ ರದ್ದುಪಡಿಸಲಾಗಿದೆ. ಸಂಘದ ಬೈಲಾವನ್ನು ತಿದ್ದುಪಡಿ ಮಾಡಲಾಗಿದೆ. ಮುಂದಿನ ಬಾರಿ ಆಯ್ಕೆಯಾಗುವ ಅಧ್ಯಕ್ಷರು ಸಂಪೂರ್ಣವಾಗಿ 5 ವರ್ಷ ಅವಧಿಗೆ ಅಧ್ಯಕ್ಷರಾಗಿರುತ್ತಾರೆ ಎಂದರು.

    ಹೊಸದುರ್ಗ ಸರ್ಕಾರಿ ನೌಕರರ ಸಂಘದ ಶಾಖೆ ವಾಣಿಜ್ಯ ಸಂಕೀರ್ಣ ಮತ್ತಿತರ ಆದಾಯ ಮೂಲವನ್ನು ಹೊಂದಿರುವುದರಿಂದ ಆರ್ಥಿಕ ಸಬಲೀಕರಣ ಸಾಧಿಸಿದೆ. ಸರ್ಕಾರ ಹಾಗೂ ಜನಪ್ರತಿನಿಧಿಗಳ ಅನುದಾನ ಬಳಸಿಕೊಂಡು ಸಂಘದ ಆಭಿವೃದ್ಧಿಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದರು.

    ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಲಕ್ಷ್ಮಯ್ಯ ಮಾತನಾಡಿ, ತಾಲೂಕಿನ ಸರ್ಕಾರಿ ನೌಕರರು ಕುಟುಂಬದಲ್ಲಿ ಶುಭ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಸಮುದಾಯ ಭವನ ನಿರ್ಮಿಸಲು ಯೋಜಿಸಲಾಗಿದೆ. ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅಗತ್ಯ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ಸಂಘಕ್ಕೆ ಪ್ರತಿ ವರ್ಷ 20 ಲಕ್ಷ ರೂ. ಅದಾಯ ಬರುತ್ತಿದ್ದು, ನೌಕರರ ಕ್ಷೇಮಾಭಿವೃದ್ಧಿ ಗೆ ಸಂಘ ಅಗತ್ಯ ಯೋಜನೆ ರೂಪಿಸಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts