ದುಶ್ಚಟ ಮಾಡಲಾರೆ ಎಂದು ಸಂಕಲ್ಪ ಮಾಡಿ

ಹೊಸಪೇಟೆ: ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ಸೇವನೆಯು ಆರೋಗ್ಯಕ್ಕೆ ಹಾನಿಕರವಾಗಿದ್ದು, ಪ್ರತಿಯೊಬ್ಬರು ವ್ಯಸನಮುಕ್ತರಾಗಿ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದರು.

ಶ್ರೀ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸೇರಿದಂತೆ ಇತರೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ನಡೆದ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಜ್ಞಾನದ ಕಾರಣದಿಂದಲು ಸಹ ಬಹುತೇಕರು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿರುತ್ತಾರೆ. ಜೀವಕ್ಕೆ ಹಾನಿ ಎಂದು ಗೊತ್ತಿದ್ದು ಬಹುತೇಕರು ಕೆಟ್ಟ ಚಟಗಳಿಗೆ ಬಲಿಯಾಗುತ್ತಾರೆ. ಇದರಿಂದ ವ್ಯಕ್ತಿಯೊಬ್ಬರಷ್ಟೇ ಅಲ್ಲ ಇಡೀ ಕುಟುಂಬದ ಸ್ವಾಸ್ಥ್ಯ ಹಾಳಾಗುವುದು, ವಿಪರ್ಯಾಸದ ಸಂಗತಿಯಾಗಿದೆ. ನಾನು ಈ ದಿನದಿಂದ ಯಾವುದೇ ದುಶ್ಚಟ ಮಾಡಲಾರೆ ಎಂದು ಸಂಕಲ್ಪ ಮಾಡುವ ಮನೋಭಾವ ಬೆಳೆಸಿಕೊಂಡಲ್ಲಿ ಉತ್ತಮ ಆರೋಗ್ಯ ಮತ್ತು ನೆಮ್ಮದಿ ಸಾಧ್ಯವಾಗಲಿದೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಮಾತನಾಡಿ, ಡಾ.ಮಹಾಂತ ಶಿವಯೋಗಿಗಳು ವ್ಯಸನಮುಕ್ತ ಆಂದೋಲನದ ಹರಿಕಾರರಾಗಿದ್ದಾರೆ. ವಿದ್ಯಾರ್ಥಿ ಯುವಜನರು ದುಶ್ಚಟಗಳಿಂದ ದೂರವಾಗಿ ಆರೋಗ್ಯಕರ ಜೀವನ ನಡೆಸುವ ಸಂಕಲ್ಪ ಮಾಡಿ, ಶ್ರೀಗಳು ಹೇಳಿದ ಸನ್ಮಾರ್ಗದಲ್ಲಿ ನಡೆಯಬೇಕು ಎಂದರು.

ಹಿಟ್ನಾಳ್‌ನ ಸರ್ಕಾರಿ ಪದವಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಟಿ.ಎಚ್.ಬಸವರಾಜ ವಿಶೇಷ ಉಪನ್ಯಾಸ ನೀಡಿದರು. ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಮಂಜುನಾಥ ಪ್ರತಿಜ್ಞಾವಿಧಿ ಬೋಧಿಸಿದರು.

ಉಪವಿಭಾಗಿಯಾಧಿಕಾರಿ ಪಿ.ವಿವೇಕಾನಂದ, ಎಎಸ್ಪಿ ಸಲೀಂ ಪಾಷಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ಕೆ.ರಾಮಚಂದ್ರಪ್ಪ, ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯ ಅಧಿಕಾರಿ ಅವಿನಾಶ ಗೋಟಖಿಂಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಮತ್ತಿತರರಿದ್ದರು.

Share This Article

ಹದ್ದಿನ ಕಣ್ಣಿನಂಥ ದೃಷ್ಟಿ ನಿಮ್ಮದಾಗಬೇಕಾ? ಇವು ನಿಮ್ಮ ಆಹಾರದಲ್ಲಿ ಇವೆಯೇ? ಚೆಕ್​ ಮಾಡಿಕೊಳ್ಳಿ

ಬೆಂಗಳೂರು: ಮಾನವನ ಅಂಗಾಂಗಗಳಲ್ಲಿ ಎಲ್ಲವೂ ಮುಖ್ಯವೇ ಆದರೂ ಕಣ್ಣುಗಳು ಪ್ರಮುಖ ಸ್ಥಾನ ಪಡೆದುಕೊಂಡಿವೆ. ಹೀಗಾಗಿಯೇ ಕಣ್ಣುಗಳು…

ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಹಣ ಅಥವಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಈಗ ಹೇಳಿರುವ ಸರಳ ಪರಿಹಾರಗಳನ್ನು…

ಮನೆಯಲ್ಲಿ ಗುಲಾಬಿ ಗಿಡ ಬೆಳೆಸುತ್ತಿದ್ದೀರಾ? ಈ ವಾಸ್ತು ನಿಯಮಗಳು ಕಡ್ಡಾಯ!

ಬೆಂಗಳೂರು: ಸಾಮಾನ್ಯವಾಗಿ ನಮ್ಮ ಹಿತ್ತಲಿನಲ್ಲಿ ಹಲವು ಬಗೆಯ ಗಿಡಗಳನ್ನು ಬೆಳೆಸುತ್ತೇವೆ. ಗುಲಾಬಿ ಗಿಡಗಳನ್ನು ಇಷ್ಟಪಡದವರೇ ಇಲ್ಲ.…