ಹೊಸಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿAದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಐದನೇ ದಿನಕ್ಕೆ ಮುಂದು ವರೆದಿದೆ. ಸೋಮವಾರ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರಗೆ ಮನವಿ ಸಲ್ಲಿಸಿದರು.
ಮೊಬೈಲ್, ವೆಬ್ ತಂತ್ರಾAಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹಾಗೂ ಸಿ ವೃಂದದ ನೌಕರರ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿಯನ್ನು ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡಬೇಕು. ಮೂಲ ಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಸೇವಾ ವಿಷಯಗಳಿಗೆ ಸಂಬAಧಿಸಿದAತೆ ಸೌಲಭ್ಯಗಳನ್ನು ಕಲ್ಪಿಸಬೇಕು. ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡುವಂತೆ ಆದೇಶ ನೀಡಬೇಕು. ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಆದೇಶ ಹೊರಡಿಸ ಬೇಕು. ಮ್ಯುಟೇಷನ್ ಅವಧಿ ದಿನವನ್ನು ವಿಸ್ತರಣೆ ಮಾಡ ಬೇಕು. ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಗುರುವಾರ ತಹಸೀಲ್ ಕಚೇರಿ ಎದುರುಬಹಾಗೂ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆಯಿಂದ ಸಂಜೆಯವರೆಗೆ ಮುಷ್ಕರ ನಡೆಸಲಾಗಿತ್ತು. ನಾಲ್ಕನೇ ಶನೀವಾರ ಹಾಗೂ ಭಾನುವಾರ ರಜೆಯ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ಜಿಲ್ಲಾಧಿಕಾರಿ ಕಚೇರಿ ಎದುರು ಮುಷ್ಕರ ಮುಂದುವರೆಸಲಾಯಿತು. ಜಿಲ್ಲೆಯ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಸೆ.21ರಿಂದ ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಷನ್ ಕಾರ್ಯಗಳನ್ನು ಸ್ಥಗಿತ ಗೊಳಿಸಿದ್ದಾರೆ. ಸೆ.26ರಿಂದ ಕರ್ತವ್ಯಕ್ಕೂ ಹೋಗದೆ ಮುಷ್ಕರ ನಡೆಸುತ್ತಿದ್ದಾರೆ. ನಮ್ಮ ಬೇಡಿಕೆ ಈಡೇರಿಕೆ ಮಾಡುವವರಿಗೆ ಹೋರಾಟ ಮುಂದುವರೆಯಲಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.