ಹೊಸಪೇಟೆ: ಬಾಲಕಾರ್ಮಿಕ ಪದ್ಧತಿಯು ಜಾಗತಿಕ ಸಮಸ್ಯೆಯಾಗಿದೆ. ಮಕ್ಕಳಲ್ಲಿ ಶಿಕ್ಷಣದ ಮೂಲಕ ಅರಿವು ಮೂಡಿಸಿದರೆ, ಬಾಲಕಾರ್ಮಿಕರ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಕನ್ನಡ ವಿವಿ ಕುಲಸಚಿವ ಡಾ.ವಿಜಯ್ ಪೂಣಚ್ಚ ತಂಬAಡ ಅಭಿಪ್ರಾಯಪಟ್ಟರು.
ಕನ್ನಡ ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಬುಧವಾರ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ನಿಮಿತ್ತ ಪ್ರತಿಜ್ಞಾ ವಿಧಿ ಸ್ವೀಕರಿಸಿ ಮಾತನಾಡಿದರು. ಪ್ರತಿ ವರ್ಷ ಜೂನ್ 12 ರಂದು ಈ ದಿನವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾವು ಒಟ್ಟಾಗಿ ಸಾರ್ವಜನಿಕರಿಗೆ ಬಾಲ ಕಾರ್ಮಿಕರ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಇನ್ನೂ ಪತ್ರಿಯೊಂದು ಮಗುವಿಗೂ ಶಿಕ್ಷಣದ ಹಕ್ಕಿದೆ. ಈ ನಿಟ್ಟಿನಲ್ಲಿ ನಮ್ಮ ಸುತ್ತಮುತ್ತಲಿನ ಅಂಗಡಿ, ಹೋಟೆಲ್, ಗ್ಯಾರೇಜ್ ಮತ್ತು ಇತರೆ ಸ್ಥಳಗಳಲ್ಲಿ ದುಡಿಯುವ ಮಕ್ಕಳನ್ನು ಗುರುತಿಸಿ, ಅವರಿಗೆ ಶಿಕ್ಷಣ ನೀಡುವ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದರು.