More

    ಮಹನಿಯರಿಗೆ ಆದರ್ಶವನ್ನು ಮೈಗೂಡಿಸಿಕೊಳ್ಳಿ

    ಹೊಸಪೇಟೆ: ಜನರು ತಮ್ಮತಮ್ಮ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ಖಂಡಿತವಾಗಿ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಗಜ್ಯೋತಿ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ಭಾವ ಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಪ್ರತಿಯೊಬ್ಬರೂ ಮಹಾ ಮಾನವತಾವಾದಿ ಬಸವಣ್ಣ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮನವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಹೇಳಿದರು.

    ಜಗಜ್ಯೋತಿ ಬಸವಣ್ಣ, 12ನೇ ಶತಮಾನದಲ್ಲಿಯೇ ಅನುಭವ ಮಂಟಪದಡಿ ಎಲ್ಲ ಜಾತಿ, ವರ್ಗದ ಜನರನ್ನು ಒಂದುಗೂಡಿಸಿ ಸಮಾನತೆಯ ಮೂಲಕ ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದ ಯುಗ ಪುರುಷ. ಅವರ ವಚನಗಳ ಮೂಲಕ ಸಾಮಾಜಿಕ ಪಿಡುಗು ಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದ ಮಹಾನ್ ದಾರ್ಶನಿಕ. ಅವರ ತತ್ವ ಸಿದ್ಧಾಂತಗಳನ್ನು 12ನೇ ಶತಮಾನದಲ್ಲಿಯೇ ಅನುಷ್ಠಾನಗೊಳಿಸಿದರೆ. ದೇಶದಲ್ಲಿ ಜಾತಿ, ಬೇಧ, ಅಸಮಾನತೆ, ಗಂಡು, ಹೆಣ್ಣು ಎಂಬ ತಾರತ್ಯಮವೇ ಇರುತ್ತಿರಲಿಲ್ಲ ಎಂದು ಹೇಳಿದರು.

    ದಾನ, ದಾಸೋಹ ಹಾಗೂ ನಿಸ್ವಾರ್ಥ ಭಕ್ತಿಗೆ ಹೆಸರಾದ ಹೇಮರೆಡ್ಡಿ ಮಲ್ಲಮ್ಮ ಅವರು ಮೋಕ್ಷದ ಮಾರ್ಗ ತೋರಿದ ಮಹಾಸಾಧ್ವಿ. ಸಮಾಜ ಸುಧಾರಣೆಯಲ್ಲಿ ಕ್ರಾಂತಿ ಮಾಡಿದ ಅವರನ್ನು ಕೇವಲ ಒಂದು ಜಾತಿಗೆ ಸೀಮಿತಗೊಳಿಸಬಾರದು. ಅವರ ವಿಚಾರ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಆದರ್ಶಪ್ರಾಯರಾಗಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts