ಹೊಸಪೇಟೆ: ದಾರ್ಶನಿಕ, ವಿರಾಗಿ ಭಗವಾನ್ ಗೌತಮ ಬುದ್ಧರ ಆದರ್ಶಗಳನ್ನು ನಾವಿಂದು ಅಳವಡಿಸಿಕೊಳ್ಳಬೇಕು. ಅವರ ಶ್ರೇಷ್ಠ ಚಿಂತನೆಗಳು ಮುಂದಿನ ಪೀಳಿಗೆಗೂ ಮಾರ್ಗದರ್ಶನ ನೀಡುವಂತಿವೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಹಯೋಗದಲ್ಲಿ ನಗರದ ಜಿಲ್ಲಾಕಾರಿ ಕಚೇರಿಯಲ್ಲಿ ಸರಳವಾಗಿ ಆಚರಿಸಿದ ಬುದ್ಧ ಪೂರ್ಣಿಮ ದಿವಾಣರಣೆಯಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿ ಮಾತನಾಡಿದರು.
ಬುದ್ಧನ ಉನ್ನತ ಆದರ್ಶಗಳು, ಅಹಿಂಸಾ ತತ್ವ, ಸಾಮರಸ್ಯದ ಸಂದೇಶಗಳು ಚಿರ ನೂತನ. ಮಾನವೀಯತೆಯ ಸಂಕೇತಗಳು ಇಡೀ ವಿಶ್ವಕ್ಕೆ ಅನ್ವಯವಾಗಲಿವೆ. ಬುದ್ಧನು ಸಮಾನತೆ, ಪ್ರೀತಿ, ದಯೆ, ಸಹಿಷ್ಣುತೆಯ ಪ್ರತೀಕ. ಸೌಹಾರ್ದ, ಸಹಾನುಭೂತಿಯಿಂದ ಸಮಾಜಕ್ಕಾಗಿ ಸೇವೆ ಮಾಡುವ ಸ್ಫೂರ್ತಿಯನ್ನು ನೀಡಿದ್ದಾರೆ ಎಂದು ಸ್ಮರಿಸಿದರು.
ಗೌತಮ ಬುದ್ಧನು ದೇವರಲ್ಲ, ದೇವದೂತನೂ ಅಲ್ಲ. ದೈವಸಂಭೂತನು ಅಲ್ಲ. ಆದರೆ ತನ್ನ ಸ್ವಸಾಮರ್ಥ್ಯದಿಂದ ಅತ್ಯುನ್ನತ ಜ್ಞಾನ ಪಡೆದು ಜಗತ್ತಿನ ಪರಮ ಸತ್ಯವನ್ನು ಬೋಧಿಸಿದ ಮಹಾಗುರು ಎಂದು ಬಣ್ಣಿಸಿದರು.
ಇದೇ ವೇಳೆ ವಿಜಯನಗರ-ಹಂಪಿ ಬುದ್ಧ ವಿಹಾರ ನಿರ್ಮಾಣ ಟ್ರಸ್ಟ್ ಪದಾಧಿಕಾರಿಗಳು ನಗರದಲ್ಲಿ ಸಿದ್ಧಾರ್ಥ ಗೌತಮ ಬುದ್ಧ ವೃತ್ತ ಎಂದು ನಾಮಕರಣಗೊಳಿಸಿ, ವೃತ್ತದ ಅಭಿವೃದ್ಧಿಗೆ ಹೈಮಾಸ್ಟ್ ವಿದ್ಯುತ್‌ದೀಪದ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರಗತಿಪರ ಚಿಂತಕ ಬಿ.ಪೀರ್ ಬಾಷಾ ಭಗವಾನ್ ಬುದ್ಧನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಕನ್ನಡ ವಿವಿಯ ಪ್ರಾಧ್ಯಾಪಕ ಚನ್ನಸ್ವಾಮಿ ಸೋಸಲೆ, ರಾಜೋತ್ಸವ ಪುರಸ್ಕೃತ ಜೆ.ಎಂ.ವೀರಸAಗಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ ಪ್ರಮುಖರಾದ ಎಂ.ಜAಬಯ್ಯ ನಾಯ್ಕ ಇತರರಿದ್ದರು.