More

    ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ವೀರಶೈವ ಜಂಗಮ ಸಮುದಾಯ ಪ್ರತಿಭಟನೆ

    ಹೊಸಪೇಟೆ: ರಾಜ್ಯದ ವೀರಶೈವ ಜಂಗಮ ಸಮುದಾಯದ ಜನರಿಗೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಒತ್ತಾಯಿಸಿ ತಾಲೂಕು ಘಟಕ ಇಲ್ಲಿನ ತಾಲೂಕು ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿತು.

    ವೀರಶೈವ ಸಮುದಾಯದ ಜನರು ಎಲ್ಲ ರಂಗಗಳಲ್ಲಿ ಹಿಂದುಳಿದಿದ್ದಾರೆ. ಈ ಹಿಂದೆ ಬೇಡ ಜಂಗಮರೆಂದು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಆರ್ಥಿಕವಾಗಿ ಹಿಂದುಳಿದವರು ಎಂಬ ಪ್ರಮಾಣ ಪತ್ರ ವಿತರಿಸುತ್ತಿದ್ದಾರೆ. ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಇತ್ತೀಚೆಗೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಈ ಬಗ್ಗೆ ಸೂಕ್ತ ಭರವಸೆ ನೀಡಿದ್ದರೂ, ಅದನ್ನು ಈಡೇರಿಸುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ‘ಸತ್ಯ ಪ್ರತಿಪಾದನೆ ಸತ್ಯಾಗ್ರಹ ಹೋರಾಟದ ಭಾಗವಾಗಿ ಮುಖ್ಯಮಂತ್ರಿಗಳ ಭೇಟಿಗೆ ತೆರಳುತ್ತಿದ್ದ ಸಮುದಾಯದ ಅಧ್ಯಕ್ಷ ಬಿ.ಡಿ.ಹಿರೇಮಠ ಸೇರಿದಂತೆ ನಾಯಕರನ್ನು ಪೊಲೀಸರು ಬಂಧಿಸಿರುವುದು ಖಂಡನೀಯ ಎಂದರು.

    ಶಿರಸ್ತೇದಾರ ಶ್ರೀಧರ್‌ಗೆ ಮನವಿ ಸಲ್ಲಿಸಲಾಯಿತು. ತಾಲೂಕು ಅಧ್ಯಕ್ಷ ಎಸ್.ಎಂ.ಕಾಶಿನಾಥಯ್ಯ, ಪ್ರಮುಖರಾದ ಎ.ಎಂ.ಬಸವರಾಜ, ಸೋಮಶೇಖರ ಬಿ.ಎಂ., ಎಸ್.ಎಂ.ವೀರ ಯ್ಯ, ಗಂಗಾಧರ ಸ್ವಾಮಿ, ಒ.ಎಂ.ಮಲ್ಲಿಕಾರ್ಜುನ ಸ್ವಾಮಿ, ಎಚ್.ಎಂ.ಕೊಟ್ರಯ್ಯ, ವೀರಮಂಗಳಮ್ಮ, ರೇಖಾ ಪ್ರಕಾಶ, ಗಂಗಮ್ಮ, ರತ್ನಮ್ಮ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts