ಹೊಸಪೇಟೆ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಆಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಈ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅ.೧೦ ಕೊನೆಯ ದಿನವಾಗಿದೆ. :hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/ಉಡಿಚಿmಚಿ oಟಿe / ಏಚಿಡಿಟಿಚಿಣಚಿಞಚಿ oಟಿe ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.