More

    ದಾವಣಗೆರೆಯಲ್ಲಿ ಆಪ್ ಸಮಾವೇಶ: ಹೊಸಪೇಟೆಯಲ್ಲಿ ಮುಖ್ಯಮಂತ್ರಿ ಚಂದ್ರು ಹೇಳಿಕೆ

    ದಾವಣಗೆರೆಯಲ್ಲಿ ಆಪ್ ಸಮಾವೇಶ: ಹೊಸಪೇಟೆಯಲ್ಲಿ ಮುಖ್ಯಮಂತ್ರಿ ಚಂದ್ರು ಹೇಳಿಕೆ

    ಹೊಸಪೇಟೆ: ಜೆಸಿಬಿ ಪಕ್ಷಗಳ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಜ್ಯಾತಿ, ಹಣ ಹಾಗೂ ತೋಳ್ಬಲದಿಂದಾಗಿ ರಾಜಕಾರಣ ಕಲುಷಿತಗೊಂಡಿದೆ ಎಂದು ಹಿರಿಯ ನಟ ಹಾಗೂ ಆಪ್ ಸ್ಟಾರ್ ಪ್ರಚಾರಕ ಮುಖ್ಯಮಂತ್ರಿ ಚಂದ್ರು ಹೇಳಿದರು.

    ಬೃಹತ್ ಸಮಾವೇಶ ಆಯೋಜಿಸಿದ್ದು, ನಾಡಿನ ಮೂಲೆ ಮೂಲೆಯಿಂದ ಸುಮಾರು 30 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆಪ್ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಭಾಗವಹಿಸುವರು.

    ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯ ಶುದ್ಧೀಕರಣಕ್ಕಾಗಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಕಣಕ್ಕಿಳಿಯಲಿದೆ. ಅದರ ಅಂಗವಾಗಿ ಆಮ್ ಆದ್ಮಿ ಪಕ್ಷದ ಪ್ರಚಾರಾರ್ಥವಾಗಿ ಮಾರ್ಚ್ 4 ರಂದು ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

    ರಾಜ್ಯದಲ್ಲಿ ಈವರೆಗೆ ಅಧಿಕಾರ ನಡೆಸಿರುವ ಎಲ್ಲ ರಾಜಕೀಯ ಪಕ್ಷಗಳು ಲೋಕಸಭೆಯಿಂದ ಗ್ರಾಪಂ ವರೆಗಿನ ಎಲ್ಲ ಚುನಾವಣಾ ಸಂದರ್ಭದಲ್ಲಿ ಜನರಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೌಲಭ್ಯಗಳನ್ನು ಕಲ್ಪಿಸುವ ಭರವಸೆಗಳನ್ನೇ ನೀಡುತ್ತಿದ್ದಾರೆ. ಹಾಗಾದರೆ, ಕಳೆದ ಏಳು ದಶಕಗಳಿಂದ ಆಯಾ ಪಕ್ಷಗಳ ಕೊಡುಗೆ ಏನು ಎಂದು ಖಾರವಾಗಿ ಪ್ರಶ್ನಿಸಿದರು.

    ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಈ ಹಿಂದೆ ಸರ್ಕಾರದಲ್ಲಿ ಕೇಳಿ ಬರುತ್ತಿದ್ದ 10, 20 ಪರ್ಸೆಂಟ್ ಕಮಿಷನ್ ಮಾತುಗಳು ಇತ್ತೀಚೆಗೆ 40,50 ಕ್ಕೆ ಏರಿಕೆಯಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಕಮಿಷನ್ ದಂಧೆ ಶೇ.100ಕ್ಕೆ ತಲುಪಿದೆ. ಸರ್ಕಾರದಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯದೆ, ಬಿಲ್ ಪಾವತಿಯಾಗುತ್ತಿರುವ ಗುಮಾನಿ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.

    ಕಳೆದ 7 ದಶಕಗಳಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಸರ್ಕಾರಗಳನ್ನೂ ನಾಡಿನ ಜನತೆ ನೋಡಿದ್ದಾರೆ. ಯಾವುದೇ ಪಕ್ಷ ನುಡಿದಂತೆ ನಡೆಯುತ್ತಿಲ್ಲ. ಆದರೆ, ಆಮ್ ಆದ್ಮಿ ಪಕ್ಷ ಮಾತ್ರ ಯಾವುದೇ ಸದ್ದು- ಗದ್ದಲವಿಲ್ಲದೇ ದೇಶಕ್ಕೆ ಮಾದರಿಯಾಗುವಂತೆ ದೆಹಲಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪಾಸ್, ಮಕ್ಕಳಿ ಗುಣಮಟ್ಟದ ಶಿಕ್ಷಣಕ್ಕಾಗಿ ಸುಸಜ್ಜಿತ ಶಾಲೆಗಳು, ಆರೋಗ್ಯ ಸುಧಾರಣೆಗಾಗಿ ಅತ್ಯಾಧುನಿಕ ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ಇದೇ ಕಾರಣಕ್ಕೆ ಕರ್ನಾಟಕದ ಜನತೆ ಕೂಡಾ ಆಪ್ ನತ್ತ ಒಲವು ತೋರುತ್ತಿದ್ದಾರೆ ಎಂದರು.

    ಶ್ರೀ ಸಾಮಾನ್ಯರಿಗೆ ಸದಾ ಸ್ವಾಗತ
    ಹಿಂದಿನ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರು, ಭ್ರಷ್ಟ ಮತ್ತು ಕೋಮುವಾದಿ ಹಾಲಿ, ಮಾಜಿ ಶಾಸಕರು, ಸಂಸದರಿಗೆ ಆಪ್‌ನಲ್ಲಿ ಅವಕಾಶವಿಲ್ಲ. ಆದರೆ, ಸಮಾಜಮುಖಿ, ಸತ್ಯ ನಿಷ್ಠರು, ವಿದ್ಯಾವಂತರು, ಸುಸಂಸ್ಕೃತರು, ಪ್ರಾಮಾಣಿಕರನ್ನು ಆಮ್ ಆದ್ಮಿ ಪಕ್ಷ ಸದಾ ಸ್ವಾಗತಿಸುತ್ತದೆ. ಅವರಲ್ಲಿ ಸೂಕ್ತ ವ್ಯಕ್ತಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನೂ ನೀಡುತ್ತದೆ ಎಂದು ಸ್ಪಷ್ಟಪಡಿಸಿದರು.

    ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕೇತ್ರದ ಎಚ್.ನಾಗರಾಜ, ಕೂಡ್ಲಿಗಿಯ ನಾರಿ ಶ್ರೀನಿವಾಸ್, ಹಗರಿಬೊಮ್ಮನಹಳ್ಳಿ ಡಾ.ಹನುಮಂತಪ್ಪ, ಹೂವಿನ ಹಡಗಲಿ ಶ್ರೀಧರ್ ನಾಯ್ಕ, ವಿಜಯನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಶಂಕರದಾಸ್, ಕಾರ್ಯಾಧ್ಯಕ್ಷ ಶಿವರಾಯಪ್ಪ ಜೋಗಿನ್, ರಾಜ್ಯ ಉಪಾಧ್ಯಕ್ಷ ರುದ್ರಯ್ಯ ನವಲಿ ಹಿರೇಮಠ್, ವಿಜಯನಗರ ಜಿಲ್ಲಾಧ್ಯಕ್ಷ ಜೆ.ಎನ್.ಕಾಳಿದಾಸ್, ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರ ಬೆಣ್ಣೆಹಳ್ಳಿ, ಸಂಘಟನಾ ಕಾರ್ಯದರ್ಶಿ ಎಂ.ಡಿ.ಮದೀನ್ ಉಪಸ್ಥಿತರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts