ಹೊಸಪೇಟೆ: ವಿವಿಧ ಬೇಡಿಕೆಗಳಿಗೆ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನಿಂದ ಶಾಸಕ ಎಚ್.ಆರ್.ಗವಿಯಪ್ಪ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಕೇಂದ್ರತ ಸರ್ಕಾರದಿಂದ ಬಿಒಸಿಡಬ್ಲೂö್ಯ ಕಾಯಿದೆ, ಸೆಸ್ ಕಾಯಿದೆ ಮುಂದು ವರೆಸಬೇಕು. ಅಂತರರಾಜ್ಯ ವಲಸೆ ಕಾರ್ಮಿಕರ ಕಾಯಿದೆ ಬಲಪಡಿಸಬೇಕು. ಕಟ್ಟಡ ಕಾರ್ಮಿಕರ ಕೇಂದ್ರ ಸಲಹಾ ಮಂಡಳಿಯನ್ನು ಪುನರುಜ್ಜೀವನಗೊಳಿಸಿ. ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಬೇರೆ ಉದ್ದೇಶಗಳಿಗೆ ವಿನಿಯೋಗಿಸಬೇಡಿ. ರಾಜ್ಯ ಕಲ್ಯಾಣ ಮಂಡಳಿಗಳಲ್ಲಿ ಕೇಂದ್ರ ಕಾರ್ಮಿಕ ಸಂಘಗಳಿಗೆ ಪ್ರಾತಿನಿಧ್ಯವನ್ನು ನೀಡಬೇಕು. ನಿರಂತರ ಪಿಂಚಣಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕು. ಕಳಪೆ ಕಾಮಾಗಾರಿಗಳಿಗೆ ಕಡಿವಾಣ ಹಾಕಬೇಕು. ನಿರ್ಮಾಣ ಕೆಲಸಗಳಲ್ಲಿ ದುಡಿಯುವ ಮಹಿಳಾ ಕಾರ್ಮಿಕರಿಗೆ ಸುರಕ್ಷತೆ, ಸಮಾನ ಕೂಲಿ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶ ವಾಪಸ್ ಪಡೆಯಬೇಕು. ಹೈಕೋರ್ಟ ಆದೇಶದಂತೆ ಶೈಕ್ಷಣಿಕ ಧನ ಸಹಾಯ ಬಿಡುಗಡೆ ಮಾಡಬೇಕು. ಬಾಕಿ ಅರ್ಜಿಗಳಿಗೂ ಧನ ಸಹಾಯ ಪಾವತಿಸಬೇಕು. ನೈಜ ಕಾರ್ಮಿಕರ ನೋಂದಣಿ ಮತ್ತು ಮರು ನೋಂದಣಿ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುವುದು ನಿಲ್ಲಬೇಕು ಹಾಗೂ ವಿಳಂಬ ಮಾಡದೇ ಕಾರ್ಡು ವಿತರಣೆ ಆಗಬೇಕು. ಸೌಲಭ್ಯಗಳಿಗಾಗಿ ಸಲ್ಲಿಸಿರುವ ಸಾವಿರಾರು ಅರ್ಜಿಗಳಗಳನ್ನು ಶೀಘ್ರವೇ ವಿಲೇವಾರಿ ಮಾಡಬೇಕು. ಪಿಂಚಣಿದಾರರಿಗೆ ಶೀಘ್ರವೇ ಅನುದಾನ ಬಿಡುಗಡೆ ಮಾಡಬೇಕು. ಟೆಂಡರ್ ಆಧಾರಿತ ಎಲ್ಲ ಖರೀದಿ ವ್ಯವಹಾರಗಳನ್ನು ನಿಲ್ಲಿಸಬೇಕು. ಅವ್ಯವಹಾರಗಳ ನ್ಯಾಯಂಗ ತನಿಖೆಯಾಗಬೇಕು. ಹೊಸ ತಂತ್ರಾAಶದಲ್ಲಿನ ತಾಂತ್ರಿಕ ತೊಂದರೆ ಪರಿಹರಿಸಬೇಕು. ಕಲ್ಯಾಣ ಮಂಡಳಿಯನ್ನು ಮತ್ತು ಸಲಹಾ ಮಂಡಳಿಯನ್ನು ಪುನರಚಿಸಿ ಕೇಂದ್ರ ಕಾರ್ಮಿಕ ಸಂಯೋಜಿತ ಸಂಘಗಳಿಗೆ ಮಾತ್ರವೇ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.