ರೋಗಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ

1 Min Read
ರೋಗಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ
ಹೊಸಪೇಟೆ ಜಿಲ್ಲಾ ಪಂಚಾಯತ್ ಕಚೇರಿಯ ಕೆಸ್ವಾನ್ ಹಾಲನಲ್ಲಿ ಶುಕ್ರವಾರ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆ ನಡೆಯಿತು.

ಹೊಸಪೇಟೆ: ಮಲೇರಿಯಾ, ಡೆಂಗೆ, ಚಿಕೂನ್‌ಗುನ್ಯ ಸೇರಿದಂತೆ ವಿವಿಧ ರೋಗಗಳ ತಡೆ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಲು ವಿವಿಧ ಇಲಾಖೆಗಳ ಸಮನ್ವಯ ಅಗತ್ಯವಾಗಿದೆ ಎಂದು ಜಿ.ಪಂ. ಸಿಇಒ ಸದಾಶಿವ ಬಿ.ಪ್ರಭು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಪಂಚಾಯತ್ ಕಚೇರಿಯ ಕೆಸ್ವಾನ್ ಹಾಲನಲ್ಲಿ ಶುಕ್ರವಾರ ನಡೆದ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಮಳೆಗಾಲ ಆರಂಭವಾಗಿದ್ದರಿAದಾಗಿ ಈಗಾಗಲೇ ಸೊಳ್ಳೆಗಳು ಹೆಚ್ಚಾಗಿವೆ. ಮಲೇರಿಯಾ, ಡೆಂಗೆ, ಚಿಕೂನ್‌ಗುನ್ಯ, ಮೆದುಳು ಜ್ವರ ಮತ್ತು ಆನೆಕಾಲು ರೋಗಗಳು ಬಾಧಿಸಲಾರಂಭಿಸುತ್ತವೆ. ಈ ಹಿನ್ನೆಲೆಯಲ್ಲ ಆರೋಗ್ಯ ಇಲಾಖೆಯ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮಗಳನ್ನು ರೂಪಿಸಿ ವಿವಿಧ ಇಲಾಖೆಗಳ ಸಹಕಾರ ಪಡೆದು ಅನುಷ್ಠಾನಗೊಳಿಸಬೇಕು ಎಂದರು.

ಓವರ್ ಹೆಡ್ ಟ್ಯಾಂಕ್ ಮತ್ತು ಸಂಪ್‌ಗಳ ನಿರ್ಮಾಣ ಮತ್ತು ಅವುಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸುವಂತೆ ಸಿವಿಕ್ ಬೈಲಾಗಳನ್ನು ಪರಿಚಯಿಸಿ ಕ್ರಮಕೈಗೊಳ್ಳಬೇಕು. ನಿಯತಕಾಲಿಕವಾಗಿ ನೀರು ಸರಬರಾಜು ಪೈಪ್‌ಗಳ ಸೋರಿಕೆಯಾಗುವ ಸ್ಥಳಗಳನ್ನು ಗುರುತಿಸಿ ದುರಸ್ತಿ ಮಾಡಿಸಬೇಕು ಹಾಗೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಡಿಎಚ್‌ಒ ಡಾ.ಶಂಕರ್ ನಾಯ್ಕ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಡಿಡಿಪಿಐ ಯುವರಾಜ ನಾಯ್ಕ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಜಂಬಯ್ಯ, ವೈದ್ಯಾಧಿಕಾರಿಗಳಾದ ಡಾ.ಬಿ.ಷಣ್ಮುಖ ನಾಯ್ಕ, ಡಾ.ವಿನಯ್, ಡಾ.ಜಗದೀಶ್ ಪಾಟ್ನಿ, ಡಾ.ರಾಧಿಕಾ, ಡಾ.ಭಾಸ್ಕರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ವ್ಯವಸ್ಥಾಪಕರಾದ ಹನುಮಂತಪ್ಪ ಇತರರಿದ್ದರು.

See also  ಶೂಟಿಂಗ್​ಗೆ ಹೊರಟರು ಬಡೆ ಮಿಯಾ, ಚೋಟೆ ಮಿಯಾ …
Share This Article