More

    ಗಣಿನಾಡಿಗೆ ಸ್ಟಾರ್ ಪ್ರಚಾರಕರ ದಂಡು

    ಹೊಸಪೇಟೆ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಚುನಾವಣೆ ಮುಗಿಯುತ್ತಿದ್ದಂತೆ, ಪ್ರಮುಖ ರಾಜಕೀಯ ಪಕ್ಷಗಳ ಸ್ಟಾರ್ ನಾಯಕರು ಉತ್ತರ ಕರ್ನಾಟಕದತ್ತ ಮುಖ ಮಾಡಿದ್ದು, ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ.

    ಇಷ್ಟು ದಿನ ಎಲ್ಲ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರು ಮೊದಲ ಹಂತದ ಚುನಾವಣೆ ಕ್ಷೇತ್ರಗಳಲ್ಲಿ ಬೀಡು ಬಿಟ್ಟಿದ್ದರು. ದಕ್ಷಿಣ ಕರ್ನಾಟಕದ ಜಿಲ್ಲೆಯಲ್ಲಿ ಮತದಾನ ಮುಕ್ತಾಯ ಅದ್ದರಿಂದ ಎಲ್ಲರ ಗಮನ ಉತ್ತರ ಕರ್ನಾಕದ ಜಿಲ್ಲೆಗಳ ಕಡೆಗೆ ಸರಿಯುತ್ತಿದೆ. ಈಗಾಗಲೇ ಬಳ್ಳಾರಿ ಕ್ಷೇತ್ರದಲ್ಲಿ ಕಳೆದ ಏ.26ರಂದಿ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ಪ್ರಚಾರ ನಡೆಸಿದರು. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿಗಳಿಗೆ ಮತಯಾಚನೆ ಮಾಡಿದರು.

    ಸೋಮವಾರ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದರು. ಮೇ 2ರಂದು ಹೊಸಪೇಟೆಯಲ್ಲಿ ಸಿದ್ದರಾಮಯ್ಯ ರೋಡ್ ಶೋ ನಡೆಸಲಿದ್ದಾರೆ. ಮತದಾರ ಯಾರಿಗೆ ಮಣಿ ಹಾಕಲಿದ್ದಾನೆ ಎಂಬುದು ಚುನಾವಣೆ ನಂತರ ಕಾದು ನೋಡಬೇಕಿದೆ. ವಿಜಯನಗರ ಜಿಲ್ಲೆಯಲ್ಲಿ ಮೇ 7 ರಂದು ಚುನಾವಣೆ ಇರುವುದರಿಂದ ಕುತೂಹಲ ಹೆಚ್ಚಾಗಿದೆ. ಹಾಗಾಗಿ ಇನ್ನು ಎರಡು ಪಕ್ಷಗಳ ದಂಡು ರಾಷ್ಟ್ರ ನಾಯಕರ ದಂಡು ದಾಂಗುಡಿ ಇಡಲಿದೆ. ಚುನಾವಣೆಯ ಅಸಲಿ ರಂಗು ಇನ್ನು ಮುಂದೆ ಮೇಳೈಸಲಿದೆ.

    ಬಳ್ಳಾರಿ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎನ್ನುವ ಹಠದಿಂದ ಬಿಜೆಪಿ ಹಲವು ಸುತ್ತಿನ ‍ಪ್ರಚಾರ ಕಾರ್ಯಗಳನ್ನು ಹಮ್ಮಿಕೊಂಡಿದೆ. ಇದರ ಜತೆಗೆ ಕಾಂಗ್ರೆಸ್ ಕ್ಷೇತ್ರವನ್ನು ಮರಳಿ ಪಡೆಯಲು ತೀವ್ರ ಪ‍್ರಯತ್ನ ನಡೆಸುತ್ತಿದೆ. ಹೀಗಾಗಿ ಪ್ರಮುಖ ನಾಯಕರು, ಮುಖಂಡರು ಕ್ಷೇತ್ರದಲ್ಲಿಯೇ ಬೀಡುಬಿಟ್ಟು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಈ.ತುಕಾರಾಂ ಬಿಜೆಪಿಯಿಂದ ಬಿ.ಶ್ರೀರಾಮುಲು ಸ್ಪರ್ಧಿಸಿದ್ದು, ಜಿದ್ದಿಗೆ ಬಿದ್ದು, ಪ್ರಚಾರದಲ್ಲಿ ತೊಡಗಿಸಿ ಕೊಂಡಿದ್ದಾರೆ. ಇದರ ಜತೆಗೆ ತಮ್ಮ ಪಕ್ಷದ ಸ್ಟಾರ್‌ ಪ್ರಚಾರಕರಿಂದ ರೋಡ್‌ ಶೋ, ವೇದಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

    ಭರ್ಜರಿ ರೋಡ್‌ ಶೋ ನಡೆಸಿದ್ದಾರೆ. ಈ ಮೂಲಕ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದೆ. ಅಲ್ಲದೇ ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಅಣ್ಣಾಮಲೈ ಹೊಸಪೇಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಬಳ್ಳಾರಿಯಲ್ಲಿ ತೆಲುಗು ಚಿತ್ರ ನಟ ಪವನ್ ಕಲ್ಯಾಣ್ ಅವರು ಕೂಡ ಬಿಜೆಪಿ ಪರ ಮತಯಾಚನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಹೊಸಪೇಟೆಯಲ್ಲಿ ಮೇ 2 ರಂದು ಸಿಎಂ ಸಿದ್ದರಾಮಯ್ಯ ಸಮಾವೇಶ, ಸತೀಶ್ ಜಾರಕಿಹೊಳಿ ಸೇರಿದಂತೆ ಇತರರು ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದರು.

    ಬಳ್ಳಾರಿ ಲೋಕಸಭೆ ಚುನಾವಣೆ ಕಾವು ಬೇರೆಡೆಗಿಂತ ಇಲ್ಲಿ ಜೋರಾಗಿದೆ. ಪ್ರತಿದಿನ ಒಂದೊಂದು ಪಕ್ಷದಿಂದ ರಾಜ್ಯ, ರಾಷ್ಟ್ರ ಮಟ್ಟದ ನಾಯಕರಿಂದ ಪ್ರಚಾರ ನಡೆಯುತ್ತಿದೆ. ಇದರಿಂದ ಜನರಿಗೆ ಚುನಾವಣಾ ಕಾವು ಜೋರಾಗಿದೆ. ಆಯಾ ಪಕ್ಷದ ಮುಖಂಡರಿಗೆ ಇಷ್ಟು ಜನರನ್ನು ಸೇರಿಸಬೇಕು ಎನ್ನುವ ಟಾರ್ಗೆಟ್‌ ನೀಡಲಾಗಿದ್ದು, ಅದರಂತೆ ಜನರನ್ನು ಸೇರಿಸುವ ಕಾರ್ಯದಲ್ಲಿ ಮುಖಂಡರು ಬ್ಯುಸಿಯಾಗಿದ್ದಾರೆ.


    ಹೊಸಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೋಡಲು ಭಾನುವಾರ ಜನಸಾಗರ ಹರಿದು ಬಂದಿತ್ತು. ಇನ್ನು ಅಣ್ಣಾಮಲೈ, ಪವನ್ ಕಲ್ಯಾಣ್ ಸೇರಿದಂತೆ ಇತರರು ಪ್ರಚಾರ ನಡೆಸಲಿದ್ದಾರೆ.
    ಚನ್ನಬಸವನಗೌಡ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ, ವಿಜಯನಗರ


    ಬಳ್ಳಾರಿಗೆ ರಾಹುಲ್ ಗಾಂಧಿ ಕೂಡ್ಲಿಗಿ ಸಿದ್ದರಾಮಯ್ಯ ಅವರು ಬಂದು ಹೋಗಿದ್ದಾರೆ. ಮತ್ತೆ ಅವಶ್ಯಕತೆ ಇದ್ದರೆ ಸ್ಟಾರ್ ಪ್ರಚಾರಕರನ್ನು ಕಳಿಸುತ್ತಾರೆ. ಸದ್ಯ ಕಾಂಗ್ರೆಸ್ ಪರ ಒಲವು ಇದ್ದು. ಮತದಾರ ಕೈ ಹಿಡಿಯಲಿದ್ದಾರೆ.
    ನಿಂಬಗಲ್ ರಾಮಕೃಷ್ಣ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ. ವಿಜಯನಗರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts