More

  ಚುನಾವಣೆ ಗುಂಗಿನಿಂದ ಸರ್ಕಾರ ಹೊರ ಬರಲಿ

  ಹೊಸಪೇಟೆ: ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದ್ದು, ಸರ್ಕಾರವೇ ಬಿತ್ತನೆ ಬೀಜ ಉಚಿತವಾಗಿ ವಿತರಿಸಬೇಕು. ಜತೆಗೆ ರೈತರ ಸಂಕಷ್ಟಕ್ಕೆ ಸರ್ಕಾರ ನೆರವಾಗಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಬಸವರಾಜ ಗೋಡಿಹಾಳ್ ಒತ್ತಾಯಿಸಿದರು.

  ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈಗ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎರಡು ಹಂತಗಳು ಮುಗಿದಿದೆ. ರಾಜ್ಯ ಸರ್ಕಾರ ಚುನಾವಣೆ ಗುಂಗಿನಿAದ ಹೊರಲಿ. ರಾಜ್ಯ ಸರ್ಕಾರ ಕಷ್ಟದಲ್ಲಿರುವ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈಗಾಗಲೇ ರಾಜ್ಯದ ಮಳೆ ಆರಂಭಗೊAಡಿದೆ. ಕೆಲ ಕಡೆ ಭಾರೀ ಗಾಳಿ ಮಳೆಗೆ ಭತ್ತ, ಬಾಳೆ, ಕಬ್ಬು ಸೇರಿದಂತೆ ಇತರೆ ಬೆಳೆಗಳು ಹಾನಿಯಾಗಿವೆ. ಈ ಬೆಳೆಗಳಿಗೂ ವೈಜ್ಞಾನಿಕ ಪರಿಹಾರ ನೀಡಬೇಕು. ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ.20ರಂದು ಬೆಳಗ್ಗೆ 10 ಗಂಟೆಗೆ ಮಹಾತ್ಮ ಗಾಂಧೀಜಿ ವೃತ್ತದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

  ಜಿಲ್ಲಾಧ್ಯಕ್ಷ ಜೆ.ಎನ್.ಕಾಳಿದಾಸ್ ಮಾತನಾಡಿ, ಜಿಲ್ಲೆಯ ಹೊಸಪೇಟೆ, ಕಮಲಾಪುರ ಹೋಬಳಿ ಭಾಗದಲ್ಲಿ 500ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಾಳೆ, ಭತ್ತದ ಬೆಳೆಗಳು ಹಾಳಾಗಿದೆ. ಸ್ವತಃ ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ ಹಾಗೂ ತಹಸೀಲ್ದಾರ್ ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬರೀ ವೀಕ್ಷಣೆಗೆ ಸೀಮಿತವಾಗದೇ ರೈತರಿಗೆ ಸಂಪೂರ್ಣವಾಗಿ ಬೆಳೆ ಹಾನಿ ದೊರೆಯಬೇಕು. ಜತೆಗೆ ಬಾಳೆ ಬೆಳೆಯುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಒಂದು ಹೆಕ್ಟೇರ್‌ಗೆ 80 ಸಾವಿರ ರೂ. ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

  ಈ ಹಿಂದೆ ಚುನಾವಣೆ ಸಮಯದಲ್ಲಿ ಶಾಸಕ ಎಚ್.ಆರ್. ಗವಿಯಪ್ಪನವರು ಕೊಟ್ಟ ಮಾತಿನಂತೆ ಸಕ್ಕರೆ ಕಾರ್ಖಾನೆಯನ್ನು ಹೊಸಪೇಟೆ ಭಾಗದಲ್ಲಿ ಆರಂಭಿಸಬೇಕು. ಈ ಕುರಿತು ಕಾರ್ಖಾನೆಗೆ ನಿಗದಿಪಡಿಸಿದ ಜಮೀನಿನ ಸರ್ವೆ ಕಾರ್ಯ ನಡೆಸಬೇಕು. ಜುಲೈ 15ರೊಳಗೆ ಕಾರ್ಖಾನೆ ಆರಂಭದ ಪ್ರಕ್ರಿಯೆ ನಡೆಸಬೇಕು. ಇಲ್ಲದಿದ್ದರೆ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

  ಪ್ರಮುಖರಾದ ಎಸ್.ಜಿ.ಮಲ್ಲಿಕಾರ್ಜುನ, ಎಲ್.ಎಸ್.ರುದ್ರಪ್ಪ, ಹೇಮರಡ್ಡಿ, ಕೊಟ್ರೇಶಪ್ಪ, ಹನುಮಂತಪ್ಪ, ಜೆ.ನಾಗರಾಜ, ಸಿ.ಎ.ಚನ್ನಪ್ಪ, ಎಂ.ಮಂಜುನಾಥ ಮತ್ತಿತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts