More

    ವಂಚನೆ ತಡೆಗೆ ವಿಶೇಷ ಕಾರ್ಯಪಡೆ: ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಕೃಷ್ಣಾರೆಡ್ಡಿ ಮಾಹಿತಿ

    ಹೊಸಪೇಟೆ: ವಂಚನೆಯಲ್ಲಿ ತೊಡಗಿರುವ ಸಹಕಾರಿ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಉನ್ನತ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಬಿ.ಎಚ್.ಕೃಷ್ಣಾರೆಡ್ಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

    ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್‌ಗಳ ಹಗರಣಗಳು ಬಯಲಾದ ಬಳಿಕ ಈಗ ರಾಜ್ಯದ ಸಹಕಾರ ಕ್ಷೇತ್ರ ವಿಶ್ವಾಸದ ಕೊರತೆ ಎದುರಿಸುತ್ತಿದೆ. ಸಹಕಾರ ಕ್ಷೇತ್ರದ ಠೇವಣಿದಾರರ ವಿಶ್ವಾಸ ಗಳಿಸಲು ಹಾಗೂ ಠೇವಣಿದಾರರ ಹಿತ ರಕ್ಷಣೆಗಾಗಿ ಸಂಯುಕ್ತ ಸಹಕಾರಿ ಮಹತ್ವದ ಹೆಜ್ಜೆ ಇರಿಸಿದೆ. ದೇಶದಲ್ಲಿ 8.5 ಲಕ್ಷ ವಿವಿಧ ರೀತಿಯ ಸಹಕಾರ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ದೇಶದ 6.30 ಲಕ್ಷ ಗ್ರಾಮಗಳಿಗೂ ಸಹಕಾರ ಕ್ಷೇತ್ರ ವ್ಯಾಪಿಸಿದೆ. ಕ್ಷೇತ್ರದ ಬೆಳವಣಿಗೆಗೆ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಿರುವುದು ಆಶಾದಾಯಕ ಬೆಳವಣಿಗೆ ಎಂದರು.

    ನಗರದ ಅಹನಾ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷರು, ನಿರ್ದೇಶಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕೆಲಸ ನಡೆದಿದೆ. ಪ್ರಕರಣ ನ್ಯಾಯಾಲಯದಲ್ಲಿದ್ದು, ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಠೇವಣಿದಾರರಿಗೆ ಹಣ ಹಿಂತಿರುಗಿಸಲು ಕ್ರವಹಿಸಲಾಗುವುದು ಎಂದು ತಿಳಿಸಿದರು. ಸಂಯುಕ್ತ ಸಹಕಾರಿ ನಿರ್ದೇಶಕರಾದ ವಿಶ್ವನಾಥ್ ಹಿರೇಮಠ, ನಂಜನಗೌಡ್ರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts