More

    ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯ

    ಹೊಸಪೇಟೆ: ಜಾನುವಾರುಗಳ ಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿಸಿ ಕಚೇರಿ ಎದುರು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

    ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಬಾರದು, ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಕೂಡಲೇ ಹಿಂಪಡೆಯಬೇಕು. ಪ್ರತಿಯೊಬ್ಬರಿಗೂ ತಮ್ಮಿಷ್ಟದ ಧರ್ಮ, ಸಂಗಾತಿ ಆಯ್ಕೆಗೆ ಅವಕಾಶ ನೀಡಲಾಗಿದೆ. ಬಲವಂತ, ಆಮೀಷದ ಮತಾಂತರ ಸರಿಯಲ್ಲ. ಹಾಗಿದ್ದೂ ರಾಜ್ಯ ಸರ್ಕಾರ ಜನರನ್ನು ಭಾವನಾತ್ಮಕವಾಗಿ ದಿಕ್ಕು ತಪ್ಪಿಸಲು ಮತಾಂತರ ನಿಷೇಧ ಕಾಯ್ದೆ ಪ್ರಸ್ತಾಪ ಮಾಡುತ್ತಿದೆ ಎಂದು ದೂರಿದರು.

    ರಾಜ್ಯದ 113 ತಾಲೂಕುಗಳು ಅತ್ಯಂತ ಹಿಂದುಳಿದಿವೆ. 11 ತಾಲೂಕುಗಳಲ್ಲಿ ಇನ್ನೂ ಬಡತನವಿದೆ. 131 ತಾಲೂಕುಗಳಲ್ಲಿ ಹಸಿವು ತಾಂಡವವಾಡುತ್ತಿದೆ. ಇವುಗಳ ಕುರಿತು ಅಧಿವೇಶನದಲ್ಲಿ ಗಂಭೀರವಾಗಿ ಚರ್ಚಿಸುವ ಬದಲು ಸಂವಿಧಾನಬದ್ಧವಾಗಿ, ಜನರ ಆಯ್ಕೆಗೆ ಬಿಟ್ಟ ವಿಚಾರಗಳಲ್ಲಿ ಮೂಗು ತೂರಿಸುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು. ಸಂಘಟನೆ ಜಿಲ್ಲಾಧ್ಯಕ್ಷೆ ಜೆ.ಚಂದ್ರಕುಮಾರಿ, ಸಹ ಕಾರ್ಯದರ್ಶಿ ಸರ್ದಾರ್ ಹುಲಿಗೆಮ್ಮ, ಪ್ರ.ಕಾ.ಜಿ.ಸರೋಜಾ, ಬಿ.ರೇಣುಕಾ, ಕೆ.ವಿಜಯಲಕ್ಷ್ಮೀ, ಅಂಬಿಕಾ, ಕೆ.ಎನ್.ಸ್ವಪ್ನಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts