More

    ಹಂಪಿ ಅಭಿವೃದ್ಧಿಗೆ ‘ಸ್ವದೇಶ ದರ್ಶನ’ ಬಲ

    ಹೊಸಪೇಟೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಸ್ವದೇಶ ದರ್ಶನ- 2.0’ಗೆ ಹಂಪಿ ಆಯ್ಕೆಯಾಗಿದ್ದು, ಅಭಿವೃದ್ಧಿಗೆ ಅನುದಾನದ ಮಹಾಪೂರ ಹರಿದು ಬರಲಿದೆ.

    ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿ ಅಪರೂಪದ ಶಿಲ್ಪ ಕಲೆಗಳನ್ನು ತನ್ನ ಒಡಲಾಳದಲ್ಲಿ ಹೊಂದಿದ್ದು, ದೇಶ- ವಿದೇಶಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವನಾಗಿದೆ. ಗತ ವೈಭವಕ್ಕೆ ಸಾಕ್ಷಿಯಾಗಿರುವ ಐತಿಹಾಸಿಕ ದೇವಾಲಯಗಳು, ಸ್ಮಾರಕಗಳನ್ನು ಕಣ್ತುಂಬಿಕೊಳ್ಳಲು ಪ್ರತಿ ವರ್ಷ ಲಕ್ಷಾಂತರ ಜನರು ಹಂಪಿಗೆ ಭೇಟಿ ನೀಡುತ್ತಾರೆ. ಸುಮಾರು ನಾಲ್ಕೈದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮೈಚಾಚಿರುವ ಹಂಪಿಯ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗಾಗಿ ಜನರು ಕಾಲ್ನಡಿಗೆಯಲ್ಲೇ ಸಾಗಬೇಕಿದೆ. ಇದಕ್ಕಾಗಿ ಕೆಲವು ಸೌಲತ್ತುಗಳ ಅಗತ್ಯವಿದೆ.

    ಹಂಪಿ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆ, ವಿಮಾನಯಾನ ಸೌಲಭ್ಯಗಳ ಹೆಚ್ಚಳದಿಂದ ಹಂಪಿಗೆ ಭೇಟಿ ನೀಡುವ ದೇಶ, ವಿದೇಶಗಳ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ಆದರೆ, ಇಂದಿಗೂ ಹಂಪಿಯಲ್ಲಿ ಕನಿಷ್ಠ ಮೂಲ ಸೌಕರ್ಯ ಇಲ್ಲ. ಈ ಹಿನ್ನೆಲೆಯ ಲ್ಲಿ ಹಂಪಿಯಲ್ಲಿ ಮೂಲ ಸೌಕರ್ಯ, ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರ ‘ಸ್ವದೇಶ ದರ್ಶನ್-2.0 ’ ಯೋಜನೆಗೆ ಆಯ್ಕೆ ಮಾಡಿದೆ.

    ಹೀಗೆ ಯೋಜನೆಯ ಉದ್ದೇಶ: ಭಾರತದ ಥೀಮ್ ಆಧಾರಿತ ಪ್ರವಾಸಿ ಸರ್ಕ್ಯೂಟ್‌ಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯ 2014-15 ರಲ್ಲಿ ‘ಸ್ವದೇಶ ದರ್ಶನ್’ಯೋಜನೆಯನ್ನು ಪ್ರಾರಂಭಿಸಿದೆ. ಸ್ವಚ್ಛ ಭಾರತ ಅಭಿಯಾನ, ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ ಮತ್ತಿತರೆ ಯೋಜನೆಗಳೊಂದಿಗೆ ಸಂಯೋಜಿಸಿದೆ. ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಹಣಕಾಸು ನೆರವು ಒದಗಿಸಲಿದೆ. ಈ ಮೂಲಕ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ ಉತ್ತೇಜಿಸಲು ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಒತ್ತು ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ. ಇದರಿಂದ ಪ್ರವಾಸೋದ್ಯಮ ಮತ್ತು ಆರ್ಥಿಕ ಬೆಳವಣಿಗೆಗೆ ಈ ಯೋಜನೆಯಿಂದ ಬೂಸ್ಟರ್ ಡೋಸ್ ಸಿಕ್ಕಂತಾಗಲಿದ್ದು, ಸ್ಥಳೀಯರಲ್ಲಿ ಉದ್ಯೋಗ ಅವಕಾಶ ಮತ್ತು ಅಭಿವೃದ್ಧಿಯ ಕನಸುಗಳು ಗರಿ ಬಿಚ್ಚಿವೆ.

    ಸ್ವದೇಶ ದರ್ಶನ್ -2.0 ಯೋಜನೆಗೆ ವಿಶ್ವವಿಖ್ಯಾತ ಹಂಪಿ ಮತ್ತು ಮೈಸೂರು ನಗರವನ್ನು ಆಯ್ಕೆ ಮಾಡಿರುವುದು ಅತ್ಯಂತ ಸಂತಸ ತಂದಿದೆ. ಇದರಿಂದ ಹಂಪಿಯಲ್ಲಿ ವ್ಯಾಪಾರ, ವ್ಯವಹಾರ ವೃದ್ಧಿಯಾಗಲಿದೆ. ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ. ಕೇಂದ್ರ ಸರ್ಕಾರದ ಈ ಕ್ರಮ ಸ್ವಾಗತಾರ್ಹ.
    | ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts