More

    ಬಿಕೋ ಎನ್ನುವಂತಿತ್ತು ಐತಿಹಾಸಿಕ ಹಂಪಿ

    ಹೊಸಪೇಟೆ: ಕೋವಿಡ್ ಹರಡಂತೆ ಮುಂಜಾಗ್ರತಾ ಕ್ರಮವಾಗಿ ಹಂಪಿಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಸಂಕ್ರಾಂತಿ ಸಂಭ್ರಮ ಕಾಣಲಿಲ್ಲ.

    ಶ್ರೀವಿರೂಪಾಕ್ಷೇಶ್ವರ ದೇಗುಲದ ಗರ್ಭಗುಡಿಯಲ್ಲಿ ಅರ್ಚಕರು ಮಾತ್ರ ಪೂಜೆ ಸಲ್ಲಿಸಿದರು. ಭಕ್ತರ ಪ್ರವೇಶ ಸಂಪೂರ್ಣ ನಿಷೇಧಿಸಲಾಗಿತ್ತು. ಮಕರ ಸಂಕ್ರಾಂತಿಗೆ ಹಂಪಿಯಲ್ಲಿ ಹೆಚ್ಚು ಜನ ಸೇರುವ ಕಾರಣ ಜ.13ರ ಬೆಳಗ್ಗೆ 6 ಗಂಟೆಯಿಂದ 17ರ ಬೆಳಗ್ಗೆ 6 ಗಂಟೆ ವರೆಗೆ ನಿಷೆೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಆದೇಶ ಹೊರಡಿಸಿದ್ದಾರೆ.

    ಪ್ರತಿ ವರ್ಷ ಹಂಪಿಯಲ್ಲಿ ಮಕರ ಸಂಕ್ರಾಂತಿ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದ ಬಳಿಕ ಶ್ರೀವಿರೂಪಾಕ್ಷೇಶ್ವರ ದೇಗುಲಕ್ಕೆ ತೆರಳಿ ದರ್ಶನ ಪಡೆಯುತ್ತಿದ್ದರು. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಿರುವುದರಿಂದ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತಿತರ ರಾಜ್ಯ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿದ್ದ ಭಕ್ತರು ಈ ಬಾರಿ ಬಂದಿಲ್ಲ.

    ಹಂಪಿಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಖಾಸಗಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ನಿಷೇಧಾಜ್ಞೆ ಮಧ್ಯೆಯೂ ಹಂಪಿ ಸ್ಮಾರಕಗಳನ್ನು ಗುರುವಾರ ವೀಕ್ಷಣೆ ಮಾಡಿದ್ದಾರೆ. ಕೋವಿಡ್ ಕಾರಣ ಹಂಪಿ ಸ್ಮಾರಕಗಳ ವೀಕ್ಷಣೆಗೆ ನಿರ್ಬಂಧ ವಿಧಿಸಿ ವಿಜಯನಗರ ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವಿಜಯ ವಿಠ್ಠಲ ದೇವಾಲಯ ಸೇರಿ ನಾನಾ ಸ್ಮಾರಕ ವೀಕ್ಷಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts