More

    ಹಂಪಿಯಲ್ಲಿ ಯೋಗ ದಿನಾಚರಣೆಗೆ ಚಿಂತನೆ – ಶ್ರೀ ವಚನಾನಂದ ಸ್ವಾಮೀಜಿ ಹೇಳಿಕೆ

    ಹೊಸಪೇಟೆ: ಈ ಬಾರಿಯ ರಾಜ್ಯ ಮಟ್ಟದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವವಿಖ್ಯಾತ ಹಂಪಿಯಲ್ಲಿ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ಹರಿಹರದ ವೀರಶೈವ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದರು.

    ಹಂಪಿಗೆ ಬುಧವಾರ ಭೇಟಿ ನೀಡಿದ ಅವರು, ಸ್ಥಳ ಪರಿಶೀಲಿಸಿ ಮಾತನಾಡಿದರು. ಈಗಾಗಲೇ ಕೊಪ್ಪಳದ ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ, ಚಿತ್ರದುರ್ಗದ ಏಳು ಸುತ್ತಿನ ಕೋಟೆಯಲ್ಲಿ ಆಯೋಜಿಸಿದ್ದ ಯೋಗ ಉತ್ಸವಗಳು ಯಶಸ್ವಿಯಾಗಿವೆ. ಮುಂಬರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತ ಹಾಗೂ ವಿಶ್ವದ್ಯಾಂತ ಗಮನ ಸೆಳೆಯವಂತೆ ಆಯೋಜಿಸುವ ಉದ್ದೇಶ ಹೊಂದಲಾಗಿದೆ ಎಂದರು.

    ಅದಕ್ಕಾಗಿ ಹಂಪಿಯ ಸ್ಮಾರಕಗಳಾದ ವಿಠ್ಠಲ ದೇವಾಲಯ ಆವರಣದ ಕಲ್ಲಿನ ರಥ, ಲೋಟಸ್ ಮಹಲ್, ವಿರೂಪಾಕ್ಷೇಶ್ವರ ದೇವಾಲಯ, ಆನೆ ಮತ್ತು ಕುದುರೆ ಲಾಯಗಳು, ಸಾಸುವೆ ಕಾಳು ಗಣೇಶ, ಬಡವಿ ಲಿಂಗ ಸೇರಿ ಹಲವಾರು ಸ್ಮಾರಕಗಳ ಮುಂದೆ ಯೋಗ ಉತ್ಸವ ನಡೆಸಲು ಸ್ಥಳ ಪರಿಶೀಲನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಸ್ಮಾರಕದ ಮುಂದೆಯೂ ಕೌಂಟ್‌ಡೌನ್ ಕಾರ್ಯಕ್ರಮಗಳನ್ನು ಆಯೋಜಿಸುವುದು ಹಾಗೂ ಅಂತಾರಾಷ್ಟ್ರೀಯ ಯೋಗ ದಿನದಂದು ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸುವ ಬಗ್ಗೆ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಎಂದು ತಿಳಿಸಿದರು.

    ಸಚಿವ ಆನಂದ್ ಸಿಂಗ್ ಮಾತನಾಡಿ, ವಿಶ್ವವಿಖ್ಯಾತ ಹಂಪಿಯಲ್ಲಿ ಯೋಗ ಉತ್ಸವ ನಡೆಸುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ ಯೋಗ ಪ್ರಚಾರಕರು ಹಾಗೂ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿಗಳ ಜತೆಯಲ್ಲಿ ವಿಸ್ಕೃತ ಚರ್ಚೆ ನಡೆಸಲಾಗಿದೆ ಎಂದರು.

    ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ, ಹರಿಹರ ಪೀಠದ ಧರ್ಮದರ್ಶಿ ಕಳಕನಗೌಡ, ವೀರಶೈವ ಲಿಂಗಾಯತ ಪಂಚಮಸಾಲಿ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿಚಿಡಿ ಕೊಟ್ರೇಶ್, ಮುಖಂಡರಾದ ಶಶಿಧರ್ ಪೂಜಾರ್, ಬೆಟ್ಟನಗೌಡ, ಬಸವನಗೌಡ, ಕಿರಣ್, ದೇವರಾಜ್ ಹಾಲಸಮುದ್ರ, ವಿಶ್ವನಾಥ ಗೌಡ, ರಾಘವೇಂದ್ರ, ಸೂರಿ ಬಂಗಾರು, ಸಂದೀಪ್ ಸಿಂಗ್, ಮಧುರ ಚನ್ನಶಾಸ್ತ್ರಿ, ಹಂಪಿ ಬಸವರಾಜ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts