More

    ಹಿಂದಿ ಭಾಷೆ ಹೇರಿಕೆಗೆ ಆಕ್ರೋಶ: ಹೊಸಪೇಟೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಪ್ರತಿಭಟನೆ

    ಹೊಸಪೇಟೆ: ರಾಷ್ಟ್ರೀಕೃತ ಬ್ಯಾಂಕ್ ಸೇರಿ ವಿವಿಧ ಸಾರ್ವಜನಿಕ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

    ಕರವೇ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಮಾತನಾಡಿ, ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಹೇಳಿಕೊಳ್ಳುವ ಮೂಲಕ ಜನರ ದಾರಿತಪ್ಪಿಸಲಾಗುತ್ತಿದೆ. ಬ್ಯಾಂಕ್‌ಗಳಲ್ಲಿ ಜನರು ವ್ಯವಹರಿಸುವುದೇ ಕಷ್ಟವಾಗಿದೆ. ಹಿಂದಿ ದಿವಸ್ ಎಂಬುದನ್ನು ಕೂಡಲೇ ರದ್ದುಪಡಿಸಬೇಕು. ಎಲ್ಲ ರಾಜ್ಯಗಳ ಸ್ಥಳೀಯ ಭಾಷೆಗಳಿಗೆ ಸೂಕ್ತ ಸ್ಥಾನಮಾನ ನೀಡಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು. ಬಳಿಕ ನಗರದ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ತೆರಳಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ, ಪ್ರಮುಖರಾದ ಸುವರ್ಣರತ್ನಾ, ವಿರೂಪಾಕ್ಷಿ, ಲತಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts