ಒಳ ಮೀಸಲಾತಿಗಾಗಿ ಉಗ್ರ ಹೋರಾಟಕ್ಕೂ ಸಿದ್ಧ

blank

ಹೊಸಪೇಟೆ: ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಇಲ್ಲಿನ ಶಾಸಕ ಎಚ್.ಆರ್.ಗವಿಯಪ್ಪ ಮನೆ ಮುಂದೆ ಶನಿವಾರ ತಮಟೆ ಚಳವಳಿ ನಡೆಯಿತು.

ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದೇ ಕಾಲ ಹರಣ ಮಾಡಲು ನ್ಯಾ. ನಾಗಮೋಹನ್ ದಾಸ್ ಆಯೋಗ ರಚನೆ ಮಾಡಿದೆ. ಈ ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವು ನೀಡಲಾಗಿಲ್ಲ. ಸರ್ಕಾರದ ಬಳಿ ನ್ಯಾ. ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ಸಮಿತಿ ವರದಿ ಇದ್ದರೂ ಒಳ ಮೀಸಲಾತಿ ಜಾರಿಗೊಳಿಸಿಲ್ಲ. ಸುಖಾಸುಮ್ಮನೆ ಈಗ ಆಯೋಗ ರಚನೆ ಮಾಡಿದೆ. ಒಳ ಮೀಸಲಾತಿ ಜಾರಿ ಆಗುವವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ನೀಡಿತ್ತು. ಆದರೆ, ಈ ಭರವಸೆ ಜಾರಿಯಾಗಿಲ್ಲ. ವಿವಿಧ ಇಲಾಖೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸಾಮಾಜಿಕ ನ್ಯಾಯ ಎಂದು ಹೇಳುವ ಪಕ್ಷವೇ ಈಗ ಸಾಮಾಜಿಕ ನ್ಯಾಯ ಒದಗಿಸುತ್ತಿಲ್ಲ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒಳ ಮೀಸಲಾತಿ ಜಾರಿಗೊಳಿಸಲು ಸೂಚಿಸಬೇಕು. ಎಂತಹ ಪ್ರಭಾವಿಗಳು ಪ್ರಭಾವ ಬೀರಿದರೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಮಾಡಿದೆ. ಇದರ ಲಾಭ ಎಂಜನಿಯರಿAಗ್, ಮೆಡಿಕಲ್ ಸೀಟುಗಳ ಹಂಚಿಕೆಯಲ್ಲಿ ಆಗಿದೆ. ಇನ್ನೂ ಮೀಸಲು ಹೆಚ್ಚಳ ಜಾರಿ ಆಗಿಲ್ಲ ಎಂಬುದು ಶುದ್ಧ ಸುಳ್ಳಾಗಿದೆ. ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿ ಬಿದ್ದಿದೆ. ಸಮಾಜ ಹೋರಾಟದ ಹಾದಿ ಹಿಡಿದಿದೆ. ಒಳ ಮೀಸಲಾತಿ ಜಾರಿಗೊಳಿಸುವುದರಿಂದ ಯಾರಿಗೂ ಅನ್ಯಾಯ ಆಗುವುದಿಲ್ಲ. ಆಯಾ ಜನಸಂಖ್ಯೆ ಅನುಸಾರವೇ ಮಾಧುಸ್ವಾಮಿ ಸಮಿತಿ ಆಧಾರದ ಮೇಲೆ ಹಿಂದಿನ ಸರ್ಕಾರ ವರ್ಗೀಕರಣ ಮಾಡಿದೆ. ಇದನ್ನು ಈಗಿನ ಸಿದ್ದರಾಮಯ್ಯನವರ ಸರ್ಕಾರ ಜಾರಿಗೊಳಿಸಬೇಕು ಒತ್ತಾಯಿಸಿದರು.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…