More

    ಸಾಗುವಳಿದಾರರಿಗೆ ಪಟ್ಟಾ ನೀಡಲು ಒತ್ತಾಯ: ಹೊಸಪೇಟೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

    ಹೊಸಪೇಟೆ: ಅರಣ್ಯ ಹಕ್ಕು ಅಧಿನಿಯಮ 2006 ಹಾಗೂ ಭೂ ಕಂದಾಯ ಕಾಯ್ದೆಯನ್ವಯ ಅಕ್ರಮ-ಸಕ್ರಮದಡಿ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುವವರಿಗೆ ಪಟ್ಟಾ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಸೋಮವಾರ ತಹಸಿಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಅರಣ್ಯವಾಸಿಗಳಿಗೆ ಅರಣ್ಯ ಹಕ್ಕು ಮಾನ್ಯತೆ, ಸ್ವಾಧೀನತೆಯಲ್ಲಿರುವ ಅರಣ್ಯ ಭೂಮಿಗಾಗಿ ಹಕ್ಕು ಪತ್ರ ಕೋರಿ 5272 ಅರಣ್ಯ ಭೂಮಿ ಸಾಗುವಳಿದಾರರು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಒಂದೇ ಒಂದು ಅರ್ಜಿ ಇತ್ಯರ್ಥ ಮಾಡಲು ಸಾಧ್ಯವಾಗಿಲ್ಲ. ಸುಪ್ರೀಂ ಕೋರ್ಟ್ 2019ರ ಫೆ.28ರಂದು ಅರಣ್ಯ ಭೂಮಿ ಸಾಗುವಳಿದಾರರ ತೆರವು ನಿಲ್ಲಿಸಿ ಶೀಘ್ರ ಅರ್ಜಿ ಇತ್ಯರ್ಥಗೊಳಿಸಲು ಆದೇಶ ನೀಡಿದ್ದು, ರಾಜ್ಯ ಸರ್ಕಾರ ಮರು ಪರಿಶೀಲನೆಗೆ 18 ತಿಂಗಳ ಕಾಲಾವಕಾಶ ಕೋರಿ ಪ್ರಮಾಣ ಪತ್ರ ಸಲ್ಲಿಸಿದೆ. ನಿಗದಿತ ಕಾಲಾವಕಾಶದಲ್ಲಿ ಹಕ್ಕು ಪತ್ರ ನೀಡದೆ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವುದು ಖಂಡನೀಯ. ನ್ಯಾಯಾಲಯ ಆದೇಶ ಹಾಗೂ ಸರ್ಕಾರಿ ಕಾಯ್ದೆಗಳನ್ನು ಜಾರಿಗೊಳಿಸದೆ ಅನುಸೂಚಿತ ಪಂಗಡ, ಜಾತಿ ಹಾಗೂ ಹಿಂದುಳಿದ ವರ್ಗದ ಭೂ ರಹಿತ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಕೂಡಲೇ ಸಾಗುವಳಿದಾರರಿಗೆ ಪಟ್ಟಾ ನೀಡಿ ಕೃಷಿ ಚಟುವಟಿಕೆಗೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಪದಾಧಿಕಾರಿಗಳಾದ ಬಾಣದ ರಾಮಣ್ಣ, ಕಲ್ಲಹಳ್ಳಿ ಹನುಮಂತಪ್ಪ, ರಾಜಾಪುರ ಕಣಿಮೆಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts